ಬ್ರೇಕಿಂಗ್ ನ್ಯೂಸ್
24-02-25 01:36 pm HK News Desk ಕರ್ನಾಟಕ
ಜಬಲ್ಪುರ/ಬೆಳಗಾವಿ, ಫೆ 24: ಮಧ್ಯಪ್ರದೇಶದ ಜಬಲ್ಪುರದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಗರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಂಭಮೇಳದಲ್ಲಿ ಭಾಗಿಯಾಗಿ ವಾಪಸ್ ಊರಿಗೆ ಮರಳುತ್ತಿದ್ದರು. ಈ ವೇಳೆ ಮಧ್ಯಪ್ರದೇಶದ ಜಬಲ್ಪುರದ ಸಿಹೋರಾ ಬಳಿ ಕ್ರೂಸರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿನ ರಸ್ತೆಗೆ ನುಗ್ಗಿದೆ. ಆಗ ಆ ಕಡೆಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ಗಾಡಿ ಅಪ್ಪಚ್ಚಿಯಾಗಿದೆ.
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಸಿಹೋರಾ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.
ಭೀಕರ ಅಪಘಾತದಲ್ಲಿ ಪ್ರಯಾಗರಾಜ್ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಆರು ಜನ ಸಾವನ್ನಪ್ಪಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
ಮೃತರು ಗೋಕಾಕ್ ನಗರದ ಲಕ್ಷ್ಮೀ ಬಡಾವಣೆಯ ಬಾಲಚಂದ್ರ ನಾರಾಯಣ ಗೌಡರ(50), ಹುಕ್ಕೇರಿ ತಾಲೂಕಿನ ಹತ್ತರಗಿ ಪೋಸ್ಟ್ ವ್ಯಾಪ್ತಿಯ ಆನಂದಪುರದ ಸುನೀಲ್ ಬಾಲಕೃಷ್ಣ ಶೇಡಶ್ಯಾಳೆ(45), ಗೋಕಾಕ್ ಗೊಂಬಿಗುಡಿ ನಿವಾಸಿ ಬಸವರಾಜ್ ನಿರಪಾದಪ್ಪ ಕುರ್ತಿ(63), ಗೋಕಾಕ್ ಗುರುವಾರ ಪೇಟೆಯ ಬಸವರಾಜ್ ಶಿವಪ್ಪ ದೊಡಮನಿ(49), ಗುಳೇದಗುಡ್ಡ ತಾಲೂಕಿನ ಕಮತಗಿಯ ಈರಣ್ಣ ಶಂಕರಪ್ಪ ಶೇಬಿನಕಟ್ಟಿ(27), ಗೋಕಾಕ್ ಗುರುವಾರ ಪೇಟೆಯ ವಿರೂಪಾಕ್ಷ ಚನ್ನಪ್ಪ ಗುಮತಿ(61) ಮೃತ ದುರ್ದೈವಿಗಳು. ಮುಸ್ತಾಕ ಶಿಂಧಿಕುರಬೇಟ್, ಸದಾಶಿವ ಉಪಲಾಳಿ ಗಾಯಗೊಂಡವರು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
KA 49M 5054 ಸಂಖ್ಯೆಯ ಕ್ರೂಸರ್ ವಾಹನದಲ್ಲಿ ಒಟ್ಟು 8 ಜನ ಪ್ರಯಾಣ ಬೆಳೆಸಿದ್ದರು. ಅವರಲ್ಲಿ ಆರು ಜನ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚೆಗೆ ನಡೆದ ಅಪಘಾತದಲ್ಲೂ ಬೆಳಗಾವಿ ಜಿಲ್ಲೆಯವರೇ ಮೃತರಾಗಿದ್ರು !
ಫೆ. 7 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದರು ಮತ್ತು 16 ಜನ ಗಾಯಗೊಂಡಿದ್ದರು.
As many as six Maha Kumbh pilgrims from Gokak in Belagavi district are feared dead in a road accident in Madhya Pradesh.The deceased have been identified as Balachandra Narayan Goudar (50), Basavaraj Shivappa Dodamani (49) and Virupax Channappa Gumati (61) of Gokak, Sunil Balakrishna Shedashale (45) of Hattaraki village, Basavaraj Nirupadappa Kurali (63) of Gomlegudi village, Iranna Sharanappa Shibaratti (27) of Kamatagi village.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm