ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್‌ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm