ಬ್ರೇಕಿಂಗ್ ನ್ಯೂಸ್
02-04-25 07:14 pm Bangalore Correspondent ಕರ್ನಾಟಕ
ಬೆಂಗಳೂರು, ಏ 02: "ಕಾನೂನು ಸುವ್ಯವಸ್ಥೆ, ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ನಡುವೆ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗುತ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೋರಮಂಗಲದ ಕವಾಯತು ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿದ ಬಳಿಕ ಮುಖ್ಯಮಂತ್ರಿಗಳು ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ, ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಇದೇ ಸಂದರ್ಭದಲ್ಲಿ ಅವರು ಅಭಿನಂದಿಸಿದರು.
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ಚುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕಿದೆ. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಅವರು ಕರೆ ನೀಡಿದರು.
ಪದಕ ವಿಜೇತರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಪದಕ ವಿಜೇತರು ಬೇರೆಯವರಿಗೆ ಪ್ರೇರಣೆಯಾಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.
ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸಿಬ್ಬಂದಿಗೆ ಕರೆ ನೀಡಿದರು.
ಗೂಂಡಾಗಿರಿ, ರೌಡಿಸಂ ಸಂಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.
Karnataka Chief Minister Siddaramaiah on Wednesday called upon the state police to harness technology for combating cybercrime, emphasizing that law and order play a crucial role in attracting investments and fostering development.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm