ಬ್ರೇಕಿಂಗ್ ನ್ಯೂಸ್
02-04-25 10:48 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 02 : 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನ ಬಂಧಿಸಲಾಗಿದೆ.
ಯುವತಿ ಕುಂದಗೋಳ ಮೂಲದವರಾಗಿದ್ದು, ನಗರದ ವಿದ್ಯಾಪೀಠ ಹಾಸ್ಟೆಲ್‌ನಲ್ಲಿ ವಾಸವಿದ್ದರು. ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿದ್ದರು. ಆರೋಪಿ ಸಿರಾಜ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಮಂಗಳವಾರ ರಾತ್ರಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ತೆರಳಿ, ಯುವತಿಯ ಕುಟುಂಬದವರಿಗೆ ಮಾಹಿತಿ ನೀಡಿದ್ದರು.
‘ಕುಂದಗೋಳ ಪಟ್ಟಣದ ಒಂದೇ ಬಡವಾಣೆಯವರಾದ ಯುವಕ, ಯುವತಿ ನಡುವೆ ಮೊದಲಿನಿಂದಲೂ ಪರಿಚಯವಿತ್ತು. ಯುವಕ ಪ್ರೀತಿಸುವಂತೆ ಒತ್ತಾಯಿಸಿ, ಹಲ್ಲೆ ನಡೆಸಿದ್ದ. ಪ್ರೀತಿಸಲು ನಿರಾಕರಿಸಿದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನನೊಂದು ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಯುವತಿ ಪೋಷಕರು ಯುವಕನ ವಿರುದ್ಧ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.
A 20-year-old paramedical college student attempted suicide by consuming pills after allegedly being harassed and blackmailed with her photographs by an acquaintance, police said on Wednesday. Following the incident on Tuesday, the 23-year-old accused, who was previously in a relationship with her, was arrested, they added.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm