ಬ್ರೇಕಿಂಗ್ ನ್ಯೂಸ್
07-04-25 08:49 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 07: ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ವರೂರುನಿಂದ ಹುಬ್ಬಳ್ಳಿ ಕಡೆ ಬರುತಿದ್ದ ಕ್ವಿಡ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕಾರು ನುಜ್ಜು ಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಬ್ಬಳ್ಳಿ ಲಿಂಗರಾಜನಗರದ ಶಂಕುತಲಾ ಹಿರೇಮಠ ಎಂಬುವರ ಕುಟುಂಬಸ್ಥರು ಒಂದೇ ಕಾರಿನಲ್ಲಿ ಐವರು ಪ್ರಯಾಣ ಬೆಳೆಸಿದ್ದರು. ಮೃತರಲ್ಲಿ ಒಬ್ಬರಾದ ಶಂಕುತಲಾ ಹಿರೇಮಠ ಖಾಸಗಿ ಪ್ರೌಢ ಶಾಲಾ ವಿಭಾಗದ ನಿವೃತ್ತ ಶಿಕ್ಷಕಿಯಾಗಿದ್ದರು.
ಮೃತರನ್ನು ಹುಬ್ಬಳ್ಳಿ ಲಿಂಗರಾಜ್ ನಗರ ನಿವಾಸಿಗಳಾದ ಒಂದೇ ಕುಟುಂಬದ ಸುಜಾತಾ ಹಿರೇಮಠ (61), ಶಂಕುತಲಾ ಹಿರೇಮಠ್ (75), ಸಂಪತ್ ಕುಮಾರಿ ಹಿರೇಮಠ (60) ಹಾಗೂ ಗಾಯತ್ರಿ ಹಿರೇಮಠ್ (65) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿ ವೀರಬಸಯ್ಯ (69) ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Four members of family were killed and another was injured in an accident at Noolvi cross, near Hubballi.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am