ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.


ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am