ಬ್ರೇಕಿಂಗ್ ನ್ಯೂಸ್
16-04-25 09:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.16 : ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿರುವ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ.
ರಾಜ್ಯದಲ್ಲಿ ಯಾವುದೇ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಬೇಕು ಎಂದರೆ ಮಕ್ಕಳಿಗೆ ಕಡ್ಡಾಯವಾಗಿ ಮೇ 31 ರೊಳಗೆ 6 ವರ್ಷ ಪೂರೈಸಿರಬೇಕಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಮಕ್ಕಳ ಸೇರ್ಪಡೆಗೆ ವಯಸ್ಸಿನ ಸಡಿಲಿಕೆ ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅದರ ಪ್ರಕಾರ, ಮೇ 31ಕ್ಕೆ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದಾಗಿದೆ. ಈವರೆಗೆ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕೆನ್ನುವುದು ಕಡ್ಡಾಯವಾಗಿತ್ತು. ಎಲ್ಕೆಜಿ, ಯುಕೆಜಿ ಪೂರೈಸಿದ್ದು ಮಕ್ಕಳಿಗೆ 5 ವರ್ಷ 5 ತಿಂಗಳಾಗಿದ್ದರೆ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು. ಪೋಷಕರ ಒತ್ತಾಯದ ಮೇರೆಗೆ ಈ ಬಾರಿಗೆ ಮಾತ್ರ ವಯೋಮಿತಿ ಸಡಿಲಿಕೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶ ಪ್ರಕಾರ, ಜೂನ್ 1 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26ನೇ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದರು. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿತ್ತು. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಗೆ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು.
ಅಂದ್ರೆ 5 ವರ್ಷ 5 ತಿಂಗಳು ಇರುವ ಮಕ್ಕಳಿಗೆ ಈ ವರ್ಷ 1ನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. 1ನೇ ತರಗತಿಯ ಅಡ್ಮಿಷನ್ ಜೊತೆಗೆ LKG ಪ್ರವೇಶ ಪಡೆಯುವ ಮಕ್ಕಳಿಗೆ 4 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಇ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
The Karnataka government has decided to give exemption from the rule of 'minimum 6 years of age' for admission to class 1 in state schools only for this academic year.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm