Karkala Mla Sunil Kumar, Parameshwar: ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆಯ ಉದ್ದೇಶ ಸ್ಪಷ್ಟವಾಗಿದೆ ; ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ, ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ, ಶಾಸಕ ಸುನೀಲ್ ಕಿಡಿ 

03-05-25 09:38 pm       HK News Desk   ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಕಾರ್ಕಳ, ಮೇ 03 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಗೃಹಸಚಿವರು ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ. ಸರಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆ ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಕುಮಾ‌ರ್ ಪ್ರಶ್ನಿಸಿದ್ದಾರೆ.

ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶ. ಸರಕಾರಕ್ಕೆ ಶಾಂತಿಯ ಬದಲು ಪಿಎಫ್‌ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೆ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.

ನಿನ್ನೆಯಷ್ಟೇ ಸ್ಪೀಕ‌ರ್ ಯು.ಟಿ. ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲಾ ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Karkala MLA Sunil Kumar Slams Anti-Communal Force Concept, Accuses Home Minister of Bowing to Muslim Leaders.