ಬ್ರೇಕಿಂಗ್ ನ್ಯೂಸ್
04-05-25 01:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.04: ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್‌ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದರು.
ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್‌ಗಳಿವೆ, ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ‍್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಾ ಇದೆ. ಎಂಟು ಜನರನ್ನ ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್‌ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಮರ್ಡರ್‌ಗಳು ಆಗಿವೆ ಎಂದು ಹೇಳಿದರು.
ನಾವು ಎಲ್ಲಾ ರೀತಿಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದೇವೆ. ಮರ್ಡರ್ ಆಗುತ್ತೆ ಎಂದು ಕ್ಲೂ ಸಿಕ್ಕಿದರೂ ಅಲರ್ಟ್ ಮಾಡಿ ತಡೆಯುವ ಕೆಲಸ ಆಗ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗ್ತಿದೆ. ಎಲ್ಲಾ ಎಚ್ಚರಿಕೆಗಳನ್ನೂ, ಸೂಚನೆಗಳನ್ನ ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.
Why Hand Over Suhas Shetty Murder Case to NIA? Our Police Are Capable, Says Parameshwar, Claims Suhas Faced 5 Cases, Yet No Visits to His Home
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm