ಬ್ರೇಕಿಂಗ್ ನ್ಯೂಸ್
05-05-25 01:30 pm HK News Desk ಕರ್ನಾಟಕ
ಹಾಸನ, ಮೇ 05: ಹೆಡ್ ಕಾನ್ಸ್ಟೇಬಲ್ನಿಂದಲೇ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಬಾಳ್ಳುಪೇಟೆಯ ಮೊಹಮ್ಮದ್ ತನ್ಜೀರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹಾಸನ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೇಬಲ್ ಅರುಣ್ ವಿರುದ್ಧ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿಬಂದಿದೆ.
80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ;
ಮೊಹಮ್ಮದ್ ತನ್ಜೀರ್ 2 ವರ್ಷದ ಹಿಂದೆ ಕೋಳಿ ಅಂಗಡಿ ಮಾಡಲು ಹೆಡ್ ಕಾನ್ಸ್ಟೇಬಲ್ ಅರುಣ್ ಬಳಿ ಸಾಲ ಪಡೆದಿದ್ದರು. 80 ಸಾವಿರ ರೂ ಹಣಕ್ಕೆ ವಾರಕ್ಕೆ 7,800 ರೂ. ಬಡ್ಡಿ ವಸೂಲಿ ಮಾಡಲಾಗುತ್ತಿತ್ತು. ತಿಂಗಳಿಗೆ 28 ಸಾವಿರ ರೂ. ಬಡ್ಡಿ ಕಟ್ಟಿ ತನ್ಜೀರ್ ಹೈರಾಣಾಗಿದ್ದರು. 80 ಸಾವಿರ ರೂ.ಗೆ 2 ಲಕ್ಷ ರೂ ಬಡ್ಡಿ ಕಟ್ಟಿದ್ರೂ ಬಿಡದೆ ಕಿರುಕುಳ ನೀಡುತ್ತಿರುವುದಾಗಿ ತನ್ಜೀರ್ ಆರೋಪಿಸಿದ್ದಾರೆ.
ಅರುಣ್ಗೆ ಬಡ್ಡಿ ಕಟ್ಟುವುದಕ್ಕಾಗಿ ತನ್ಜೀರ್ ವಕೀಲ ದುಶ್ಯತ್ ಸೇರಿ ಹಲವರಿಂದ ಸಾಲ ಪಡೆದಿದ್ದರು. ಎರಡು ವಾರದಿಂದ ಬಡ್ಡಿ ಕಟ್ಟದಿದ್ದಕ್ಕೆ ತನ್ಜೀರ್ಗೆ ಕಿರುಕುಳ ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದ ತನ್ಜೀರ್, ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ತನ್ಜೀರ್ಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೀಟರ್ ಬಡ್ಡಿ ಆರೋಪ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಹೊರಡಿಸಿದರು ಕೂಡ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಮಾತ್ರ ಇನ್ನೂ ನಿಂತಿಲ್ಲ. ಅದೆಷ್ಟೋ ಬಡ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು.
Hassan Head Constable Runs Loan Shark Racket, Man Attempts Suicide Over Harassment by police constable Arun, who works at the SP office. Tanveer is the man who attempted suicide.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm