ಬ್ರೇಕಿಂಗ್ ನ್ಯೂಸ್
10-05-25 11:30 am HK News Desk ಕರ್ನಾಟಕ
ಮಂಡ್ಯ, ಮೇ 10 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಯುವಕನ್ನು ತಾಲ್ಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಆರೋಪಿ
ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಮಾತನಾಡಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೇ 8ರಂದು ಎಐ ತಂತ್ರಜ್ಞಾನ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸರ ಗಮನಕ್ಕೆ ತಂದಿದ್ದರು.
ಪ್ರಧಾನಿ ನರೇಂದ್ರಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಹಂಚಿಕೊಂಡಿರುವ ಜಾವೀದ್ ಪಾಷ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಮುಂದೆ ನೂರಾರು ಮಂದಿ ಜಮಾಯಿಸಿ ಆರೋಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಮಂಡ್ಯ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಮಾತನಾಡಿ, ‘ಕಾಶ್ಮೀರದಲ್ಲಿ 26 ಮಂದಿ ಬಲಿ ಪಡೆದ ಪಾಕಿಸ್ತಾನ ಉಗ್ರರ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಇಂಥ ವ್ಯಕ್ತಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು
Kirugavalu Police have arrested a man for his post on a social media platform allegedly defaming Prime Minister Narendra Modi in Malavalli taluk of Mandya district, on Friday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am