ಬ್ರೇಕಿಂಗ್ ನ್ಯೂಸ್
21-05-25 11:33 am HK News Desk ಕರ್ನಾಟಕ
ವಿಜಯಪುರ, ಮೇ 21 : ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.
ಮಹಿಂದ್ರಾ TUV 300 ನಲ್ಲಿದ ತೆಲಂಗಾಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.



ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಕಾರು ಆರಂಭದಲ್ಲಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಆರ್ ಎಲ್ ಬಸ್ನಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದರು. ಆದರೆ ಚಾಲಕ ಭಾರೀ ಅಪಘಾತವಾಗುವುದನ್ನು ತಪ್ಪಿಸಿ ಅಲ್ಲಿದ್ದವರ ಜೀವ ಉಳಿಸಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಬೆಳಗಿನ ಜಾವವಾಗಿದ್ದರಿಂದ ಏನಾಯಿತು ಎನ್ನುವುದು ಗೊತ್ತಾಗಲಿಲ್ಲ.ಏಕಾಏಕಿ ಭಾರೀ ಶಬ್ದ ಕೇಳಿತು. ನಮ್ಮ ಬಸ್ ಪಕ್ಕಕ್ಕೆ ನಿಂತಿತ್ತು. ಹೊರಗೆ ಇಳಿದು ನೋಡಿದರೆ ವಾಹನಗಳ ನಡುವೆ ಅಪಘಾತ ಆಗಿರುವುದು ಕಂಡು ಬಂದಿತು.ಅಪಘಾತದ ಸನ್ನಿವೇಶ ನೋಡಿ ಭಯವಾಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಣೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Accident in Vijaypura, Mahindra TUV 300 Crashes into Divider, Collides with VRL Volvo Bus and Truck, 5 Killed on Spot. According to Laxman Nimbargi, Superintendent Of Police, Vijaypura , a Mahindra SUV 300 vehicle traveling towards Solapur jumped the median and collided with a private bus coming from Mumbai to Ballari.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm