ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm