Belagavi, Rain, Death: ಗೋಡೆ ಕುಸಿದು ಮೂರು ವರ್ಷದ ಮಗು ಸಾವು ; ಜೀವ ತೆಗೆದ ಮಳೆರಾಯ

26-05-25 12:21 pm       HK News Desk   ಕರ್ನಾಟಕ

ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲೋನಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಬೆಳಗಾವಿ, ಮೇ 26 : ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲೋನಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ಗೋಕಾಕ ಮಹಾಲಿಂಗೇಶ್ವರ ನಗರದ ಕೀರ್ತಿಕಾ ನಾಗೇಶ ಪೂಜಾರಿ ಎಂಬ ಮೂರು ವರ್ಷದ ಮಗು ಮೃತಪಟ್ಟಿದೆ.

ಮನೆಯ ಹಿಂಬದಿಯ ಗೋಡೆ ಕುಸಿದು ಮಗುವಿನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದೆ. ನಾಲ್ಕು ವರ್ಷದ ಬಾಲಕಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಕೊಠಡಿಯಲ್ಲಿ ಅಕ್ಕ-ತಂಗಿ ಮಲಗಿದ್ದರು. ಮತ್ತೊಂದು ಕೊಠಡಿಯಲ್ಲಿ ತಂದೆ-ತಾಯಿ ಮಲಗಿದ್ದರು.

ಬೆಳಗಿನ ಜಾವ ಕುಸಿದು ಗೋಡೆ ಕುಸಿದಿದೆ. ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.

Wall Collapse Kills 3 Year Old Child, Deadly Rain Claims a Life.