ಬ್ರೇಕಿಂಗ್ ನ್ಯೂಸ್
29-05-25 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರಿಗೆ ಸಿಎಂ ಸಿದ್ದರಾಮಯ್ಯ ಹೊಸ ಜವಾಬ್ದಾರಿ ನೀಡಿದ್ದಾರೆ. ಗುರುವಾರ ಸದಾಶಿವ ನಗರದಲ್ಲಿ ಇರುವ ಅವರ ನಿವಾಸಕ್ಕೆ ದಿಢೀರ್ ಭೇಟಿ ಕೊಟ್ಟ ಸಿಎಂ ಕೆಲ ಹೊತ್ತು ಮಾತುಕತೆ ನಡೆಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಅವರು ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಹಾಗಾಗಿ ಬರುತ್ತೇನೆ ಎಂದಿದ್ದೆ. ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಭೇಟಿ ಸಂದರ್ಭದಲ್ಲಿ ರಾಜಕೀಯ ಚರ್ಚೆ ಅಂತ ಮಾಡಿಲ್ಲ. ಬದಲಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆ ಯಾಗಿದೆ. ಅಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಿಂದುಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದೇವೆ ಎಂದರು.
ಮಂಗಳೂರಿಗೆ ಬಿಕೆ ಹರಿಪ್ರಸಾದ್;
ಬಿಕೆ ಹರಿಪ್ರಸಾದ್ ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ ಎಂದರು.
ಮಂಗಳೂರಲ್ಲಿ ಸಾಲು ಸಾಲು ಹತ್ಯೆಗಳ ಬಗ್ಗೆ ಮಾತನಾಡಿ, ಯಾರೇ ಎಷ್ಟೇ ಪ್ರಭಾವಿ ಇದ್ದರೂ ಕೂಡ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಕಾನೂನಿನಿಂತ ದೊಡ್ಡ ವರು ಅಲ್ಲ, ಕಾನೂನೇ ಎಲ್ಲರಿಗಿಂತ ದೊಡ್ಡದು. ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಕೊಲೆಗಳು ನಡೆದಿವೆ. ಅಶ್ರಫ್, ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಇದೀಗ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಅಬ್ದುಲ್ ರೆಹ್ಮಾನ್ ಹತ್ಯೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿದೆ. ಮೇ 30 ರವರೆಗೆ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ.
CM Holds Breakfast Meeting with Congress MLC B K Hariprasad, Plans Visit to Mangalore Amid Communal Tensions.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm