ಬ್ರೇಕಿಂಗ್ ನ್ಯೂಸ್
01-06-25 09:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1 : ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದಲೂ ಮನ್ನಣೆ ದೊರೆತಿದ್ದು, ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗೂ ತೊಂದರೆ ಉಂಟಾಗಿತ್ತು.
ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
Karnataka Tobacco Use Banned in Public Places rs 1,000 Fine, Hookah Also Prohibited.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm