ಬ್ರೇಕಿಂಗ್ ನ್ಯೂಸ್
04-06-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 04 : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಸಂಭ್ರಮಾಚರಣೆ ಸೂತಕವಾಗಿ ಬದಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಐಪಿಎಲ್ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 'ಕನ್ನಡಿಗರ ಜನಪ್ರಿಯ ಆರ್‌ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ," ಎಂದು ಆರೋಪಿಸಿದ್ದಾರೆ.
"ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟ ಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ," ಎಂದು ವಾಗ್ದಾಳಿ ನಡೆಸಿದ್ದಾರೆ.
ಚಾಂಪಿಯನ್ ಆರ್‌ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನು ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ ಎಂದು ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿರುವ ಅವರು, ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಹೇಳಿದ್ದಾರೆ.
Killer RCB Celebration, R Ashoka Blames Congress Govt for Stampede Tragedy, Demands Rs 25 Lakh Compensation for Victims Families.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm