ಬ್ರೇಕಿಂಗ್ ನ್ಯೂಸ್
06-06-25 05:32 pm Bengaluru Staff ಕರ್ನಾಟಕ
ಬೆಂಗಳೂರು, ಜೂನ್ 6: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಆದೇಶದ ಮೇರೆಗೆ ಪೊಲೀಸರು ಬಂಧನ ಪ್ರಕ್ರಿಯೆಗೆ ಮುಂದಾಗುತ್ತಿದ್ದಂತೆ, ಕೆಎಸ್ ಸಿಎ ಹೈಕೋರ್ಟ್ ಮೆಟ್ಟಿಲೇರಿದೆ. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧವೇ ಆರೋಪಗಳನ್ನು ಮಾಡಿದೆ. ವಿಧಾನಸೌಧ ಮುಂದೆ ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡಲು ಹೇಳಿದ್ದೇ ರಾಜ್ಯ ಸರ್ಕಾರ ಎಂದು ಗಂಭೀರ ಆರೋಪ ಮಾಡಿದೆ. ಇದೇ ವೇಳೆ, ಆರ್ ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಪತ್ನಿಯೂ ಕೋರ್ಟ್ ಮೆಟ್ಟಿಲೇರಿದ್ದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.
ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನ ಇಂದು ಬೆಳಗ್ಗೆ ಬೆಂಗಳೂರು ಏರ್ಪೋರ್ಟ್ ನಲ್ಲಿ ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಅವರ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂಧನಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. ಸಿಎಂ ಆದೇಶದಂತೆ, ತಮ್ಮ ಪತಿಯನ್ನ ಯಾವುದೇ ವಿಚಾರಣೆ, ನೋಟಿಸ್ ಮಾಡದೆ ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಮುಂದಿಟ್ಟು ರಿಟ್ ಅರ್ಜಿ ಸಲ್ಲಿಸಿದ್ದಾರೆ. ತನಿಖೆಯನ್ನೇ ನಡೆಸದೇ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧನ ಮಾಡಲಾಗಿದ್ದು, ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ, ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಸರ್ಕಾರದ ಪ್ರತಿನಿಧಿ ಡಿಸಿಎಂ ಕೂಡ ಭಾಗಿಯಾಗಿದ್ದರು. ಸರ್ಕಾರದ ಕಡೆಯಿಂದಲೇ ಆಯೋಜನೆ ಮಾಡಿದ್ದ ಕಾರ್ಯಕ್ರಮದ ನೆಪದಲ್ಲಿ ತನ್ನ ಪತಿಯನ್ನು ಬಂಧಿಸಲಾಗಿದೆ ಎಂದು ಆಕ್ಷೇಪ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶ ಎಂದು ತಿಳಿಸಲಾಗಿತ್ತು. ಆರ್ ಸಿಬಿ ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧ ಮುಂಭಾಗದಲ್ಲಿ ಸರ್ಕಾರದ್ದೇ ಕಾರ್ಯಕ್ರಮ ಆಯೋಜಿಸಿ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ಅವಘಡ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ ಆರ್ ಸಿಬಿ ಕಡೆಯಿಂದ ಯಾವುದೇ ಲೋಪವೆಸಗಿಲ್ಲ. ಹೀಗಾಗಿ ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕೂಡ ರಾಜ್ಯ ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಗೆ ಮೆಟ್ಟಿಲೇರಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಸೂಚನೆ ಕೊಟ್ಟಿದ್ದೇ ಸರ್ಕಾರ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಿದ್ದು ಈ ಕುರಿತ ದಾಖಲೆಯನ್ನೂ ಒದಗಿಸಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಮುಂಭಾಗದಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರದ ಕಡೆಯಿಂದಲೇ ಆಯೋಜನೆ ಆಗಿದ್ದರೂ ಜನರ ಆಕ್ರೋಶದ ಹಾದಿ ತಪ್ಪಿಸಲು ತಮ್ಮ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಈ ಮೂಲಕ ಒಟ್ಟು ಪ್ರಕರಣ ರಾಜ್ಯ ಸರ್ಕಾರಕ್ಕೆ ತಿರುಗುಬಾಣವಾಗುತ್ತಾ ಎನ್ನುವ ಜಿಜ್ಞಾಸೆ ಮೂಡಿದೆ. ಮತ್ತೊಂದೆಡೆ, ಹೈಕೋರ್ಟ್ ಕೂಡ ಕಾಲ್ತುಳಿತ ಘಟನೆ ಸಂಬಂಧಿಸಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು ಸರ್ಕಾರಕ್ಕೆ ನೋಟಿಸ್ ಮಾಡಿದೆ.
The controversy surrounding the recent RCB victory celebration has intensified, with the Karnataka State Cricket Association (KSCA) and the wife of Royal Challengers Bengaluru’s marketing manager approaching the High Court against the state government and police action.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm