ಬ್ರೇಕಿಂಗ್ ನ್ಯೂಸ್
06-06-25 09:03 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6 : ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ಕೇಳಿಬರುತ್ತಿದ್ದರೆ, ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ.
ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಸರ್ಕಾರ ವಿನಾಕಾರಣ ಅಮಾನತು ಶಿಕ್ಷೆ ನೀಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಇವೆಲ್ಲದರ ಮಧ್ಯೆ ಪೊಲೀಸ್ ಇಲಾಖೆಯದ್ದೇ ಸಿಬ್ಬಂದಿ ನರಸಿಂಹರಾಜು, ಪೊಲೀಸ್ ಅಧಿಕಾರಿಗಳ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪೊಲೀಸ್ ವಶವಾಗಿದ್ದಾರೆ.

ಮಡಿವಾಳ ಠಾಣೆಯ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಸರ್ಕಾರದ ನಡೆಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಆಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹ ಮಾಡಿದ್ದಾರೆ. ಅವರನ್ನು ಕೂಡಲೇ ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದು ನೂಕುನುಗ್ಗಲು ಉಂಟಾಗಿ ದುರಂತ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದರು.
Police Constable Protests Against Suspension of Commissioner Dayanand; Wears Black Band, Demonstrates Outside Raj Bhavan.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm