ಬ್ರೇಕಿಂಗ್ ನ್ಯೂಸ್
11-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11 : ಸಚಿವ ಸಂಪುಟ ಪುನರ್ ರಚನೆಗೆ ಒಲವು ತೋರಿದ್ದ ದೆಹಲಿ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಮನವೊಲಿಸಿದ್ದು, ಸಂಪುಟ ಸರ್ಜರಿಯನ್ನು ವರ್ಷಾಂತ್ಯದ ವರೆಗೂ ಮುಂದಕ್ಕೆ ಹಾಕಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಕೇಂದ್ರ ನಾಯಕರನ್ನು ಒಪ್ಪಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಈಗಾಗಲೇ ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸು ಕುಸಿದಿದ್ದು, ಇದರ ನಡುವೆ ಸಚಿವರ ಬದಲಾವಣೆ ದೋಷವನ್ನು ಒಪ್ಪಿಕೊಂಡಿದ್ದೇವೆಂಬ ಸಂದೇಶ ರವಾನಿಸುತ್ತದೆ. ಹೀಗಾಗಿ, ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎಂದು ಹೇಳಿದ್ದಾರೆ. ಆದರೆ, ನವೆಂಬರ್ ವೇಳೆಗೆ ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಆ ವೇಳೆಗೆ ಸರ್ಜರಿ ಪ್ರಕ್ರಿಯೆ ಖಚಿತ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕಾಲ್ತುಳಿತ ಘಟನೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದು ಜನರ ವಿಶ್ವಾಸ ಗಳಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಪುನರ್ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಆಮೂಲಕ ಕಾಲ್ತುಳಿತ ಘಟನೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಪಕ್ಷದ ಹಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿಗೆ ಮುಂದಾಗಿದ್ದರು. ಸಚಿವರು ತಮ್ಮ ಸಚಿವಾಲಯದ ಸಾಧನೆಗಳನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ತೆಗೆದುಕೊಂಡು ದೆಹಲಿಗೆ ಭೇಟಿ ನೀಡಿದ್ದರೆ, ಸಚಿವ ಆಕಾಂಕ್ಷಿಗಳೂ ದೆಹಲಿ ಹಾದಿ ಹಿಡಿದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಸದ್ಯಕ್ಕೆ ಬದಲಾವಣೆ ಬೇಡ ಎನ್ನುವ ಮಾತನ್ನು ಕೇಂದ್ರ ನಾಯಕರ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.
The much-anticipated Karnataka cabinet reshuffle has been put on hold, with Chief Minister Siddaramaiah and Deputy Chief Minister D.K. Shivakumar successfully persuading the Congress high command to defer the exercise until the end of the year.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am