ಬ್ರೇಕಿಂಗ್ ನ್ಯೂಸ್
13-06-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13 : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಸೋಮವಾರದಿಂದ ಅಂದರೆ ಜೂನ್ 16 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.
ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿತು.
ಏಪ್ರಿಲ್ ಆದೇಶದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿತ್ತು. ಇಲ್ಲದಿದ್ದರೆ ರಾಜ್ಯ ಸರ್ಕಾರವು ಇದಕ್ಕೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು ಎಂದು ಹೇಳಿತ್ತು. ನಂತರ ಈ ಗಡುವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿತ್ತು.
ಶುಕ್ರವಾರದ ವಿಚಾರಣೆಯಲ್ಲಿ, ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಹೊಸ ನಿಯಮಗಳನ್ನು ರೂಪಿಸುತ್ತಿದ್ದರೆ ಮಾತ್ರ ತಡೆಯಾಜ್ಞೆ ನೀಡಲು ಸಾಧ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಆದರೆ, ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ದೃಢಪಡಿಸಿದರು.
ಇದು ಸಾರ್ವಜನಿಕ ಹಿತಾಸಕ್ತಿ ಮತ್ತು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ವಿಷಯ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ತಡೆ ನೀಡಲು ನಿರಾಕರಿಸಿತು.
ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳ ಅಗತ್ಯವಿಲ್ಲ, ಬದಲಿಗೆ 1988 ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಅವು ಕಾರ್ಯನಿರ್ವಹಿಸಬಹುದು ಎಂದು ಅಗ್ರಿಗೇಟರ್‌ಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಪ್ರತಿಪಾದಿಸಿದರು. ಆದರೆ, ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ರಕ್ಷಣೆಯಲ್ಲಿ ಬೈಕ್ ಟ್ಯಾಕ್ಸಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ವಾದಿಸಿತು.
ಹೀಗಾಗಿ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ 24 ರಂದು ನಿಗದಿಪಡಿಸಿತು. ಅಲ್ಲಿಯವರೆಗೆ, ಸದ್ಯಕ್ಕೆ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯ ಅನಿಶ್ಚಿತವಾಗಿದೆ.
ಸಾರಿಗೆ ಇಲಾಖೆ ಮತ್ತು ಆಟೋ-ರಿಕ್ಷಾ ಹಾಗೂ ಟ್ಯಾಕ್ಸಿ ಒಕ್ಕೂಟಗಳು ಬೈಕ್ ಟ್ಯಾಕ್ಸಿಗಳನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿವೆ. 2021ರಲ್ಲಿ ಆರಂಭವಾಗಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಸಹ ಮಹಿಳೆಯರ ಸುರಕ್ಷತೆ ಮತ್ತು ಕಾನೂನು ಉಲ್ಲಂಘನೆಗಳ ಕಾರಣದಿಂದ 2024ರಲ್ಲಿ ಸರ್ಕಾರ ಹಿಂತೆಗೆದುಕೊಂಡಿತ್ತು.
ಆದರೆ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ಮುಂದುವರಿಸಿದ್ದವು. 2022ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದವು. ಈ ಆದೇಶದಲ್ಲಿ, ಕಾನೂನು ಸಮಸ್ಯೆಗಳು ಇತ್ಯರ್ಥವಾಗುವವರೆಗೆ ಬೈಕ್ ಟ್ಯಾಕ್ಸಿ ಆಪರೇಟರ್‌ಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ಬಂಧ ಹೇರಿತ್ತು.
ಆದರೆ, ಏಪ್ರಿಲ್‌ನಲ್ಲಿ ಆದೇಶವನ್ನು ಮಾರ್ಪಡಿಸಿ, ಬೈಕ್ ಟ್ಯಾಕ್ಸಿ ನಿಷೇಧಿಸುವ ಸರ್ಕಾರದ ಹಕ್ಕನ್ನು ಎತ್ತಿ ಹಿಡಿದಿತ್ತು.
The Karnataka High Court, on Friday, refused to suspend a single judge’s order requiring bike taxi services to stop operating until the state government creates rules under the Motor Vehicles Act.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm