ಬ್ರೇಕಿಂಗ್ ನ್ಯೂಸ್
25-06-25 10:32 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ. ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ.
ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ತಂದೆ, ತಾಯಿಯನ್ನು ಕಳೆದ 1 ತಿಂಗಳ ಹಿಂದೆಯಷ್ಟೇ ಮಗ ವೃದ್ರಾಶ್ರಮಕ್ಕೆ ಸೇರಿಸಿದ್ದ. ಮನೆಯಲ್ಲಿ ಸೊಸೆ ಮಾಡುವ ಅಡುಗೆ ಚೆನ್ನಾಗಿರಲ್ಲ ಅನ್ನೊ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ, ತಾಯಿ ಇಬ್ಬರನ್ನು ಮಗ ವೃದ್ಧಾಶ್ರಮಕ್ಕೆ ನೂಕಿಬಿಟ್ಟಿದ್ದಾನೆ. ಇದರಿಂದ ಆಘಾತಕ್ಕೆ ಒಳಗಾಗಿದ್ದ ತಂದೆ ತಾಯಿ ನೇಣಿಗೆ ಶರಣಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಬ್ಬರಿದ್ದ ರೂಮಿನ ಬಾಗಿಲು ತೆಗೆದಿರಲಿಲ್ಲ. ಇದರಿಂದ ಅನುಮಾನಗೊಂಡ ಆಶ್ರಮದವರು ಬಾಗಿಲು ಹೊಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಹೊಸ ಮನೆ ಮಾಡುವ ಬದಲಿಗೆ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನ ಸೇರಿಸಿ ಓಡಿ ಹೋಗಿದ್ದ. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನ ಕರೆದುಕೊಂಡು ಬರಲಾಗಿತ್ತು. ಆದ್ರೆ ಮನೆಯಲ್ಲಿ ಹೊಂದಾಣಿಕೆ ಆಗದೆ ಮತ್ತೆ ಗಲಾಟೆ ಜೋರಾಯಿತು. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು.
ಆದರೆ ಮೊನ್ನೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋದವರು ಬೆಳಿಗ್ಗೆ ಆದರೂ ಬಾಗಿಲು ತೆರೆಯಲಿಲ್ಲ, ಅವಮಾನಗೊಂಡ ಆಶ್ರಮದ ಸಿಬ್ಬಂದಿಗಳು ಬಾಗಿಲು ಹೊಡೆದು ನೋಡಿದ್ದಾಗ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
In a heart-wrenching incident reported from Bengaluru, an elderly couple died by suicide at an old age home after allegedly being forced to live there by their son due to household disagreements, including issues related to their daughter-in-law's cooking. The tragic event occurred at an old age home located in JP Nagar 8th Phase. The deceased have been identified as Krishnamurthy (81) and his wife Radha (74). The couple was found hanging in their room early Tuesday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am