ಬ್ರೇಕಿಂಗ್ ನ್ಯೂಸ್
26-06-25 12:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26 : ರಾಜ್ಯ ಸರ್ಕಾರ ನಿಷೇಧಿಸಿರುವ ಬೈಕ್ ಟ್ಯಾಕ್ಸಿ ಸೇವೆ ಐಷಾರಾಮಿ ಅಲ್ಲ. ಬದಲಿಗೆ ಟ್ರಾಫಿಕ್ ದಟ್ಟಣೆ ಇರುವ ನಗರಗಳಲ್ಲಿ ಜನರ ಪಾಲಿನ ಅವಶ್ಯಕತೆಯಾಗಿದೆ. ಹೀಗಾಗಿ ಸರ್ಕಾರಕ್ಕೆ ಅದನ್ನು ನಿಷೇಧಿಸುವ ಅಧಿಕಾರ ಇಲ್ಲ ಎಂದು ಅಗ್ರಿಗೇಟರ್‌ಗಳು, ಬೈಕ್ ಮಾಲೀಕರು ಕರ್ನಾಟಕ ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.
ಬೈಕ್ ಟ್ಯಾಕ್ಸಿಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿರುವ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು ಬೈಕ್ ಟ್ಯಾಕ್ಸಿ ಸೇವೆಯು ನಗರ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಸ್ತಿತ್ವದಲ್ಲಿರುವ ಕಾನೂನು ನಿಬಂಧನೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಹೀಗಿರುವಾಗ ನಿಷೇಧ ವಿಧಿಸಿರುವುದು ತಪ್ಪಾಗುತ್ತದೆ ಎಂದು ವಾದಿಸಿದರು.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ ಏಕ ನ್ಯಾಯಾಧೀಶರ ತೀರ್ಪಿನ ವಿರುದ್ಧ ಓಲಾ, ಉಬರ್ ಮತ್ತು ರ್ಯಾಪಿಡೊ ಹಾಗೂ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಸಂಘಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.
ಕರ್ನಾಟಕ ಸರ್ಕಾರವು 1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಬೈಕ್ ಟ್ಯಾಕ್ಸಿ ಬಳಕೆ ಬಗ್ಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ತಿಳಿಸುವ ವರೆಗೆ ಬೈಕ್ ಟ್ಯಾಕ್ಸಿಗಳನ್ನು ನಿರ್ಬಂಧಿಸಲಾಗಿತ್ತು. ರಾಜ್ಯ ಸಾರಿಗೆ ಇಲಾಖೆಯಿಂದ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಅವುಗಳಿಗೆ ಒಪ್ಪಂದದ ಸಾಗಣೆ ಪರವಾನಗಿಗಳನ್ನು ನೀಡಬಹುದಾಗಿದೆ, ಈ ಬಗ್ಗೆ ಸರ್ಕಾರ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದರಂತೆ, ಆರು ವಾರ ಕಾಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶದಲ್ಲಿ ಸೂಚಿಸಲಾಗಿತ್ತು. ನಂತರ ಗಡುವನ್ನು ಜೂನ್ 15ರ ವರೆಗೆ ವಿಸ್ತರಿಸಲಾಗಿತ್ತು.
ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಬೇರೆ ವಾಹನಗಳು ತಲುಪದ ಜಾಗಕ್ಕೂ ತಲುಪಲು ಬೈಕ್ ಟ್ಯಾಕ್ಸಿಗಳು ಅತ್ಯಗತ್ಯ ಎಂದು ವಾದಿಸಿದ ಅರ್ಜಿದಾರರ ಪರ ವಕೀಲರು, ರಾಜ್ಯದ 2021ರ ಇ-ಬೈಕ್ ಟ್ಯಾಕ್ಸಿ ನೀತಿಯನ್ನು ಉಲ್ಲೇಖಿಸಿ, ಕರ್ನಾಟಕವು ಈಗಾಗಲೇ ಅಂತಹ ಸೇವೆಗಳಿಗೆ ಅಡಿಪಾಯ ಹಾಕಿದೆ. ಈಗ ವಿಧಿಸಿರುವ ನಿಷೇಧವು ರಾಜಕೀಯ ಪ್ರೇರಿತವಾಗಿದೆ ವಾದಿಸಿದರು. ಅಲ್ಲದೆ, ರಾಜ್ಯ ಸರ್ಕಾರವು ಟ್ಯಾಕ್ಸಿಗಳಿಗೆ ದರಗಳನ್ನು ವಿಧಿಸುವ ಅಥವಾ ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಪ್ರಸ್ತುತ ದರವು ಕಿಲೋಮೀಟರ್‌ಗೆ 8 ರೂ.ಗಳಷ್ಟಿದೆ. ಬೈಕ್ ಟ್ಯಾಕ್ಸಿಗಳು ಜನದಟ್ಟಣೆಯ ಪ್ರದೇಶಗಳಲ್ಲಿ ಸಂಚರಿಸಲು ಅಥವಾ ಕಾರುಗಳು ಮತ್ತು ಆಂಬ್ಯುಲೆನ್ಸ್‌ಗಳಿಗೆ ತೆರಳಲಾಗದ ಸ್ಥಳಗಳನ್ನು ತಲುಪಲು ಸಾರಿಗೆ ವಿಧಾನವಾಗಿದೆ ಎಂದು ವಕೀಲ ಶಶಾಂಕ್ ಗರ್ಗ್ ಹೇಳಿದರು.
ಅಲ್ಲದೆ, ಮೋಟಾರು ವಾಹನ ಕಾಯ್ದೆಯಲ್ಲಿ ಸಾರಿಗೆ ವಾಹನಗಳನ್ನಾಗಿ ದ್ವಿಚಕ್ರ ವಾಹನ ನೋಂದಣಿಗೆ ಅವಕಾಶವಿರುವಾಗ ಬೈಕ್ ಟ್ಯಾಕ್ಸಿಯನ್ನು ನೋಂದಾಯಿಸುವುದಿಲ್ಲ ಮತ್ತು ಬೈಕ್ ಟ್ಯಾಕ್ಸಿಗೆ ಕ್ಯಾರಿಯೇಜ್ ಪರವಾನಗಿಗೆ ಅನುಮತಿ ನೀಡುವುದಿಲ್ಲವೆಂದು ರಾಜ್ಯ ಸರ್ಕಾರ ಹೇಳಲಾಗದು ಎಂದೂ ವಕೀಲರು ಹೈಕೋರ್ಟ್ ಗಮನಕ್ಕೆ ತಂದರು. ಬೈಕ್ ಮಾಲೀಕರನ್ನು ಪ್ರತಿನಿಧಿಸುವ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ನಿಯಮಗಳು ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿದರೆ, ರಾಜ್ಯ ಸರ್ಕಾರವು ನಿರಂಕುಶವಾಗಿ ಪರವಾನಗಿಗಳನ್ನು ನಿರಾಕರಿಸುವಂತಿಲ್ಲ. ಅದು ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಗ್ರಿಗೇಟರ್ ನಿಯಮಗಳು ಬೈಕ್ ಟ್ಯಾಕ್ಸಿಗಳ ನಿರ್ವಹಣೆಗೆ ಅನುಮತಿ ನೀಡುತ್ತವೆ ಮತ್ತು ರಾಜ್ಯ ಸರ್ಕಾರವು ಅಗತ್ಯ ಪರವಾನಗಿ ನೀಡಲು ಅವಕಾಶ ಇದೆ ಎಂದು ಹೇಳಿದರು.
Bike taxi services are not a luxury but a necessity in cities plagued by traffic congestion, argued aggregators and bike owners before the Karnataka High Court, challenging the state government's ban on bike taxis.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am