ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm