ಬ್ರೇಕಿಂಗ್ ನ್ಯೂಸ್
01-07-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1 : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕುರಿತ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು ಸರ್ಕಾರಕ್ಕೆ ಭಾರೀ ದೊಡ್ಡ ಹಿನ್ನಡೆಯಾಗಿದೆ. ಸಿಬಿಐ ಅಧಿಕಾರಿಗಳು ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿದ್ದರು. ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಇದಲ್ಲದೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಸರ್ಕಾರಕ್ಕೂ ಮನವಿ ಮಾಡಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿತ್ತು. 187 ಕೋಟಿಯಲ್ಲಿ 94 ಕೋಟಿ ಹೈದರಾಬಾದ್ ಬ್ಯಾಂಕ್ಗೆ ವರ್ಗಾಯಿಸಲಾಗಿತ್ತು. ಹೈದ್ರಾಬಾದ್ ಫಸ್ಟ್ ಬ್ಯಾಂಕ್ನ 18 ನಕಲಿ ಖಾತೆಗಳಿಗೆ 94 ಕೋಟಿ ರೂ. ವರ್ಗಾವಣೆ ಆಗಿತ್ತು. ಇದೆಲ್ಲವೂ ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ಆಂಧ್ರದ ನಾಗೇಶ್ವರ್ ರಾವ್ ಸೂಚನೆಯಂತೆ ವರ್ಗಾವಣೆಯಾಗಿತ್ತು ಎನ್ನುವುದು ತನಿಖೆಯಲ್ಲಿ ತಿಳಿದುಬಂದಿತ್ತು.
ವರ್ಗಾವಣೆ ಆದ ಹಣವನ್ನು ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಬಿಡಿಸಿಕೊಂಡಿದ್ದು ನಕಲಿ ಖಾತೆಗಳಿಂದ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿತ್ತು. ನೆಟ್ ಬ್ಯಾಂಕಿಂಗ್, ಆರ್ಟಿಜಿಎಸ್, ಫೋನ್ ಪೇ, ಗೂಗಲ್ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡಿ, ಆ ಹಣವನ್ನ ಸತ್ಯನಾರಾಯಣ ವರ್ಮಾ ಡ್ರಾ ಮಾಡಿಕೊಂಡು ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಜತೆಗೂಡಿ ಹಣ ಹಂಚಿಕೆ ಮಾಡಿಕೊಂಡಿದ್ದರು.
ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ವರ್ಗಾಯಿಸಿಕೊಂಡ ಹಣದಲ್ಲಿ 21 ಕೋಟಿಯಷ್ಟು ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳ್ಳಾರಿಯ ನಾಲ್ಕು ಕ್ಷೇತ್ರಕ್ಕೆ 21 ಕೋಟಿ ರೂಪಾಯಿಷ್ಟು ಹಣದ ಹೊಳೆ ಹರಿದಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಾಂಗ್ರೆಸ್‌ನ ನಾಲ್ಕು ಶಾಸಕರು ಮತ್ತು ಸಂಸದರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಇಡಿ ಅಧಿಕಾರಿಗಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ.
ಹಗರಣದ ಆರೋಪಿ ಸತ್ಯನಾರಾಯಣ ವರ್ಮಾ ತನ್ನ ಬಳಿ ಇದ್ದ 4.2 ಕೋಟಿ ರೂ. ಹಣದಲ್ಲಿ 1.5 ಕೋಟಿಯಷ್ಟು ಸಾಲ ತೀರಿಸಿದ್ದಾನೆ. 1.2 ಕೋಟಿ ರೂ. ಬೆಲೆ ಬಾಳುವ ಬೆಂಝ್ ಕಾರ್ ಖರೀದಿಸಿದ್ದಾನೆ. ಉಳಿದ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ತೊಡಗಿಸಿದ್ದಾನೆ ಎಂದು ಇಡಿ ತನಿಖೆಯಲ್ಲಿ ತಿಳಿದುಬಂದಿತ್ತು. ಅಲ್ಲದೇ, ಮೂರು ಕಂತುಗಳಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭನಿಗೆ ಐದು ಕೋಟಿ ರೂ. ನೀಡಿದ್ದ. ರಾಜ್ಯದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿದ್ದರೂ, ಈಗ ಸಿಬಿಐಗೆ ತನಿಖೆ ಹಸ್ತಾಂತರ ಆಗಿರುವುದರಿಂದ ರಾಜಕೀಯ ಮುಖಂಡರಿಗೆ ಢವ ಢವ ಶುರುವಾಗಿದೆ.
In a major setback to the Karnataka government, the High Court has ordered the transfer of the Valmiki Scheduled Tribes Development Corporation scam probe to the Central Bureau of Investigation (CBI). The scandal involves large-scale illegal fund transfers, with allegations that crores of rupees meant for tribal welfare were diverted for political purposes, including election campaigns.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm