Bengaluru Rural Name: ಬೆಂಗಳೂರು ಗ್ರಾಮಾಂತರ ಜಿಲ್ಲೆಯಿನ್ನು ಬೆಂಗಳೂರು ಉತ್ತರ ; ಬಾಗೇಪಲ್ಲಿಗೆ ಭಾಗ್ಯನಗರ ಎಂದು ಮರು ನಾಮಕರಣ, ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ 

02-07-25 10:05 pm       Bangalore Correspondent   ಕರ್ನಾಟಕ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಬಳಿಕ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. 

ಬೆಂಗಳೂರು, ಜುಲೈ 2 : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಬಳಿಕ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. 

ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡುವಂತೆ ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ, ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಾಗಲಿದೆ.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

In a significant move following the renaming of Ramanagara to Bengaluru South, the Karnataka government, led by Chief Minister Siddaramaiah, has approved the renaming of Bengaluru Rural district to Bengaluru North district. The decision was taken during the state cabinet meeting held at Nandi Hills (Nandi Giridhama).