ಬ್ರೇಕಿಂಗ್ ನ್ಯೂಸ್
02-07-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜುಲೈ 1 ರಂದು ನ್ಯಾಯಮಂಡಳಿ ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸಿಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದು, ಇಂದೇ ಅರ್ಜಿ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಆದರೆ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿತು.
ಇದಕ್ಕುತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಅಮಾನತು ಆದೇಶ ರದ್ದುಪಡಿಸಿದ ಕಾರಣ ಅಧಿಕಾರ ವಹಿಸಿಕೊಳ್ಳಲು ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
The Karnataka State Government has approached the High Court challenging the Central Administrative Tribunal (CAT) order that revoked the suspension of Additional Commissioner of Police Vikas Kumar in connection with the Chinnaswamy Stadium stampede incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am