ಬ್ರೇಕಿಂಗ್ ನ್ಯೂಸ್
08-07-25 11:15 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 8 : ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು "ಅಧಿಸೂಚಿತ ಕಾಯಿಲೆ" ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ.
ಹಠಾತ್ ಸಾವಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ, ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಆರೋಗ್ಯ ಸಚಿವರು, ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.
"ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ನಾವು ನಿರ್ಧರಿಸಿದ್ದೇವೆ. ಆಸ್ಪತ್ರೆಗಳ ಹೊರಗೆ ಹಠಾತ್ ಸಾವು ಸಂಭವಿಸಿದರೆ ಅದನ್ನು ಸರ್ಕಾರಕ್ಕೆ ತಿಳಿಸಬೇಕು" ಎಂದು ಸಚಿವರು ಹೇಳಿದರು. ಹುಟ್ಟಿನಿಂದಲೇ ರೋಗಗಳನ್ನು ಹೊಂದಿರುವ ಜನ ಇರುವುದರಿಂದ", ಸುಮಾರು 15 ವರ್ಷ ವಯಸ್ಸಿನ ಮಕ್ಕಳು ಸೇರಿದಂತೆ ಹೆಚ್ಚಿನ ಜನರನ್ನು ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.
ಇದಲ್ಲದೆ, ಹೃದಯಾಘಾತ ಮತ್ತು ಹಠಾತ್ ಸಾವುಗಳ ಬಗ್ಗೆ ಅರಿವು ಹೆಚ್ಚಿಸುವ ದೃಷ್ಟಿಯಿಂದ ಈ ಕುರಿತು ಪಠ್ಯಪುಸ್ತಕಗಳಲ್ಲಿ ಪ್ರತ್ಯೇಕ ಪಠ್ಯ ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಿಪಿಆರ್ ಕುರಿತು ಜನರಿಗೆ ತರಬೇತಿ ನೀಡಲು ಸಹ ನಿರ್ಧರಿಸಲಾಗಿದೆ. ಇದಲ್ಲದೆ, ರಾಜ್ಯದ 86 ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಈ ವರ್ಷ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.
ಹಠಾತ್ ಹೃದಯಾಘಾತದಿಂದ ಬಳಲುತ್ತಿರುವ ಜನರಿಗೆ ಚಿಕಿತ್ಸೆ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಹಠಾತ್ ಹೃದಯಾಘಾತ ಮತ್ತು ಕೋವಿಡ್ -19 ಸೋಂಕು ಮತ್ತು ಲಸಿಕೆಯೊಂದಿಗೆ ಅವುಗಳ ಸಂಭಾವ್ಯ ಸಂಬಂಧದ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿ, ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ದಿನೇಶ್ ಗೂಂಡುರಾವ್ ಹೇಳಿದರು.
In a significant move to address the alarming rise in sudden deaths across the state, the Karnataka government has officially declared “sudden death” as a notifiable disease. The Health Department has also made post-mortem examinations mandatory in all cases of death due to heart attack, particularly when occurring outside hospital settings.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am