Chamarajanagar Heart Attack, Student; 'ಹೃದಯ"ಕ್ಕೆ ಆಘಾತ...! ನಾಲ್ಕನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ ; ಪಾಠ ಕೇಳುತ್ತಿರುವಾಗಲೇ ಕುಸಿದು ಬಿದ್ದು ಸಾವು 

09-07-25 04:12 pm       HK News Desk   ಕರ್ನಾಟಕ

ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.

ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;

  • ಸರ್ಕಾರಿ ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆ ಎಂದು ಪರಿಗಣಿಸಲು ನಿರ್ಧಾರ.
  • ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳ ಡೆತ್ ಸರ್ಟಿಫಿಕೇಟ್ ಪಡೆಯಲು ಮರಣೋತ್ತರ ಪರೀಕ್ಷೆ ಕಡ್ಡಾಯ.
  • 15 ವರ್ಷದ ಎಲ್ಲ ಶಾಲಾ ಮಕ್ಕಳನ್ನು ಹೃದಯ ತಪಾಸಣೆಗೆ ಒಳಪಡಿಸಲು ನಿರ್ಧಾರ.
  • ಪಠ್ಯ ಪುಸ್ತಕದಲ್ಲಿ ಶಾಲಾ ಮಕ್ಕಳಿಗೆ ಅಸಾಂಕ್ರಾಮಿಕ ರೋಗ, ಹೃದಯ circular ಅಳವಡಿಸಲು ಶಿಕ್ಷಣ ಇಲಾಖೆಗೆ ಮಾಹಿತಿ ಕಳುಹಿಸಲಾಗಿದೆ.
  • ಹಠಾತ್ ಹೃದಯಘಾತಗಳ ಸಂದರ್ಭದಲ್ಲಿ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿರುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ.
  • ಬಸ್ ಸ್ಟಾಂಡ್, ರೈಲ್ವೇ ನಿಲ್ದಾಣಗಳಲ್ಲಿ ಸ್ವಯಂ ಚಾಲಿತ AED ಯಂತ್ರಗಳನ್ನ ಇಡಲು ನಿರ್ಧಾರ. ಸಾರ್ವಜನಿಕರಿಗೆ ಸಿಪಿಆರ್ ತರಬೇತಿ ನೀಡಲು‌ ಯೋಜನೆ.
  • ಖಾಸಗಿ ಕಂಪನಿಗಳು, ಉದ್ದಿಮೆದಾರರು ತಮ್ಮ ಕಂಪನಿಗಳಲ್ಲಿ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ನಡೆಸಲು ಸಲಹೆ.

In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.