ಬ್ರೇಕಿಂಗ್ ನ್ಯೂಸ್
11-07-25 04:22 pm HK News Desk ಕರ್ನಾಟಕ
ಬೆಳಗಾವಿ, ಜುಲೈ 11 : ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಯೋಧನೊಬ್ಬ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಯೋಧ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಕುಸಿದು ಬೀಳುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಳಗಾವಿ ತಾಲೂಕಿನ ಅನಗೋಳ ನಿವಾಸಿ ಇಬ್ರಾಹಿಂ ದೇವಲಾಪುರ (35) ಮೃತ ಯೋಧ. ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ರಾಹಿಂ ರಜೆಯಲ್ಲಿ ಊರಿಗೆ ಬಂದಿದ್ದು ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಇಬ್ರಾಹಿಂ ಅವರು ತಲೆಸುತ್ತು ಬಂದ ರೀತಿ ಎಲ್ಲರೂ ನೋಡುತ್ತಿದ್ದಾಗಲೇ ರಸ್ತೆ ಪಕ್ಕ ನಿಂತಿದ್ದ ಯುವಕನ ಕೈ ಹಿಡಿಯುತ್ತ ನೆಲಕ್ಕೆ ಉರುಳಿದ್ದಾರೆ. ಕೂಡಲೇ ಅಲ್ಲಿದ್ದ ಜನರು ಸೇರಿದ್ದು ಆರೈಕೆ ಮಾಡಿದ್ದಾರೆ. ಇಬ್ರಾಹಿಂ ಕುಸಿದು ರಸ್ತೆಗೆ ಬಿದ್ದಿದ್ದು ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದಾರೆ. ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಎಚ್ಚರವಾಗದ ಕಾರಣ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ಇಬ್ರಾಹಿಂ ಉಸಿರು ನಿಲ್ಲಿಸಿದ್ದರು. ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೀದರ್ ; ಅತಿಥಿ ಉಪನ್ಯಾಸಕ ಕುಸಿದು ಬಿದ್ದು ಸಾವು
ಬೀದರ್ನಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಹುಲಸೂರು ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ಡಾ.ರವಿಕುಮಾರ್(42) ಸಾವನ್ನಪ್ಪಿದವರು. ಬಸವ ಕಲ್ಯಾಣದಿಂದ ಹುಲಸೂರಿಗೆ ಕರ್ತವ್ಯಕ್ಕೆಂದು ತೆರಳುತ್ತಿದ್ದಾಗ ಎದೆ ನೋವು ಕಾಣಿಸಿತ್ತು.
ಇದೇ ವೇಳೆ, ಇದ್ದಕ್ಕಿದ್ದಂತೆ ಎದೆ-ಸೊಂಟ ನೋವು ಹೆಚ್ಚಾಗಿದೆ ಎಂದು ಸಹೋದ್ಯೋಗಿಗೆ ಕರೆ ಮಾಡಿ ತಿಳಿಸಿದ್ದರು. ಕಾಲೇಜಿಗೆ ಬರುವುದು ಬೇಡ ಕೂಡಲೇ ವೈದ್ಯರ ಬಳಿ ತೆರಳಲು ಸಲಹೆ ನೀಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದಾಗಲೇ ಸಾವು ಕಂಡಿದ್ದಾರೆ. 6 ವರ್ಷಗಳಿಂದ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾಗಿ ರವಿ ಕೆಲಸ ಮಾಡಿದ್ದರು.
#Belagavi: Army soldier Ibrahim Devalapur (35) dies of #heartattack while walking; incident caught on CCTV. #Bidar: Guest lecturer Dr. Ravikumar (42) dies en route to work after chest pain. Both passed away before receiving treatment. 💔
— Headline Karnataka (@hknewsonline) July 11, 2025
#HeartAttack #KarnatakaNews pic.twitter.com/3xzHcWjL2G
In two separate but equally tragic incidents in Karnataka, a serving Indian Army soldier and a college guest lecturer died after suffering sudden heart attacks, leaving their communities in shock.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am