ಬ್ರೇಕಿಂಗ್ ನ್ಯೂಸ್
14-07-25 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14 : ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ, ಅಸ್ವಾಭಾವಿಕ ಸಾವು, ಅತ್ಯಾಚಾರ -ಕೊಲೆ ಪ್ರಕರಣಗಳಿಗೆ ಸಂಬಂಧಿಸಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ,. ಜುಲೈ 12ರಂದು ರಾಷ್ಟ್ರೀಯ ಮಾಧ್ಯಮದಲ್ಲಿ ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಮತ್ತು ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ.
ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20 ವರ್ಷಗಳಲ್ಲಿ ಗಂಭೀರ ಸ್ವರೂಪದ ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು, ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವುದೆಂದು ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದಾಗ ಸಿಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿದ್ದಾರೆ. ಹೀಗಾಗಿ ಕಳೆದ 20 ವರ್ಷಗಳಲ್ಲಿ ನಡೆದಿರುವ ಯುವತಿಯರ ನಾಪತ್ತೆ, ಅಸ್ವಾಭಾವಿಕ ಸಾವು- ಕೊಲೆ ಪ್ರಕರಣಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
Karnataka State Commission for Women has urged Chief Minister Siddaramaiah to constitute a Special Investigation Team (SIT) to probe the mysterious disappearances, unnatural deaths, and suspected murders and sexual assaults of women and students reported over the last two decades in the Dharmasthala region.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am