Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ ತನಿಖೆಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ರಚಿಸಿ ; ನಿವೃತ್ತ ಜಡ್ಜ್ ಗೋಪಾಲ ಗೌಡ ಆಗ್ರಹ 

17-07-25 04:50 pm       Bangalore Correspondent   ಕರ್ನಾಟಕ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಸಾಕ್ಷಿದಾರನೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರೂ, ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೇ ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯ ಸಲುವಾಗಿ ಎಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟಿನ ಹಾಲಿ ಜಡ್ಜ್ ನೇತೃತ್ವದಲ್ಲಿ ಮೇಲ್ವಿಚಾರಣೆಗೆ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ಗೋಪಾಲ ಗೌಡ ಆಗ್ರಹ ಮಾಡಿದ್ದಾರೆ.

ಬೆಂಗಳೂರು, ಜುಲೈ 17 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಸಾಕ್ಷಿದಾರನೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರೂ, ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೇ ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯ ಸಲುವಾಗಿ ಎಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟಿನ ಹಾಲಿ ಜಡ್ಜ್ ನೇತೃತ್ವದಲ್ಲಿ ಮೇಲ್ವಿಚಾರಣೆಗೆ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ಗೋಪಾಲ ಗೌಡ ಆಗ್ರಹ ಮಾಡಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಿರಿಯ ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ಜೊತೆಗೆ ಸುದ್ದಿಗೋಷ್ಟಿ ನಡೆಸಿದ ಅವರು, ಸಾಕ್ಷಿದಾರ ಹೇಳಿರುವ ವಿಚಾರಗಳು ಗಂಭೀರವಾಗಿದ್ದು, ಸಾರ್ವಜನಿಕರ ಗಮನ ಸೆಳೆದಿದೆ. ಮೂರು ವಾರಗಳಿಂದ ಆಗುತ್ತಿರುವ ಬೆಳವಣಿಗೆಯನ್ನು ನೋಡಿದ್ದೇನೆ. ಸಾಕ್ಷಿದಾರ ವ್ಯಕ್ತಿ ಸ್ವತಃ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಆದರೆ ತನಿಖೆ ನಡೆಸಬೇಕಾದ ಪೊಲೀಸರು ಸರಿಯಾದ ರೀತಿಯಲ್ಲಿ ಹೋಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸೂಕ್ತ ತನಿಖೆ ನಡೆಸುವ ಜವಾಬ್ದಾರಿ ಹೊಂದಿದ್ದಾರೆ. ಇದಕ್ಕಾಗಿ ಉನ್ನತ ಮತ್ತು ದಕ್ಷ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಬೇಕು ಎಂದು ಹೇಳಿದ್ದಾರೆ.

ಸಾಕ್ಷಿದಾರ ನೀಡಿರುವ ಹೇಳಿಕೆಯನ್ನು ಆಧರಿಸಿ ತನಿಖೆ ಕೈಗೊಳ್ಳಬೇಕಾಗಿದೆ. ನುರಿತ ಎಫ್ಎಸ್ಎಲ್ ಮತ್ತು ಡಿಎನ್ಎ ಟೆಸ್ಟ್ ಮಾಡುವ ತಜ್ಞರನ್ನೂ ನೇಮಕ ಮಾಡಬೇಕು. ಅಲ್ಲಿರುವ ಸಮಾಧಿಗಳನ್ನು ಅಗೆದು ಕಳೇಬರಗಳನ್ನು ತೆಗೆದು ತನಿಖೆ ನಡೆಸಬೇಕಾಗಿದೆ. ಅಲ್ಲದೆ, ತನಿಖಾ ಹಂತಗಳನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ಆಗ್ರಹಿಸಿದರು. ಈಗಾಗಲೇ ನಮ್ಮ ವಕೀಲರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದು, ಎಸ್ಐಟಿ ರಚನೆಗೆ ಮನವಿ ಮಾಡಿದ್ದಾರೆ. ವಿಶೇಷ ತನಿಖಾ ತಂಡ ರಚಿಸುವ ವಿಶ್ವಾಸ ಇದೆ ಎಂದು ಗೋಪಾಲ ಗೌಡ ಹೇಳಿದ್ದಾರೆ.

ಯಾವುದೇ ಪ್ರಭಾವಕ್ಕೆ ಒಳಗಾಗದೆ ಪ್ರಕರಣದಲ್ಲಿ ಸಂಬಂಧಪಟ್ಟವರನ್ನು ಬಂಧಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕು. ಹಾಗಾದಲ್ಲಿ ಮಾತ್ರ ಮುಚ್ಚಿ ಹೋದ ವಿಚಾರಗಳು ಹೊರಗೆ ಬರಬಹುದು ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ದ್ವಾರಕನಾಥ್, ಹಿರಿಯ ವಕೀಲ ಬಾಲನ್ ಮತ್ತಿತರರು ಇದ್ದರು.

A witness has given a statement in court that hundreds of bodies were buried in Dharmasthala, but the police are not investigating in the right direction.