ಬ್ರೇಕಿಂಗ್ ನ್ಯೂಸ್
22-07-25 10:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22 : ವ್ಯಾಪಾರಿಗಳು ತೆರಿಗೆ ನೋಟಿಸ್ಗೆ ಗಾಬರಿಯಾಗೋದು ಬೇಡ. ನಿಮ್ಮ ಉತ್ತರ ಅವಲಂಬಿಸಿ ದಂಡದ ಮೊತ್ತ, ಜಿಎಸ್ಟಿ ಎಷ್ಟೆಂದು ನಿಗದಿಯಾಗಲಿದೆ. ನೋಟಿಸ್ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್ಟಿ, ದಂಡ ಪಾವತಿ ಕಡ್ಡಾಯ ಆಗಿರುವುದಿಲ್ಲ ಎಂದು ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಲು ಯತ್ನಿಸಿದೆ.
ಕೋರಮಂಗಲದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ 'ಜಿಎಸ್ಟಿ ತಿಳಿಯಿರಿ' ಎನ್ನುವ ವಿಷಯದಲ್ಲಿ ಸಭೆ ನಡೆಸಲಾಗಿದ್ದು, ವ್ಯಾಪಾರಿಗಳ ಪ್ರಶ್ನೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ಮೀರಾ ಪಂಡಿತ್ ಉತ್ತರಿಸಿದರು. ಮೊದಲ ಹಂತದಲ್ಲಿ ಕೋಟ್ಯಂತರ ರು. ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ 850 ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಜಿಎಸ್ಟಿ ವಂಚನೆ ಕುರಿತು ಬೇರೆ ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಸಂಸ್ಥೆಗಳ ಮಾಹಿತಿ ರೇರಾದಿಂದ ಪಡೆದು ನೋಟಿಸ್ ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ನೋಟಿಸ್ನಲ್ಲಿ ಉಲ್ಲೇಖಿಸಿರುವಷ್ಟು ಸರಕು ಮತ್ತು ಸೇವಾ ತೆರಿಗೆ, (ಜಿಎಸ್ಟಿ) ದಂಡ ಮತ್ತು ಬಡ್ಡಿಯನ್ನು ಸಣ್ಣ ವ್ಯಾಪಾರಿಗಳು ಪಾವತಿಸುವುದು ಕಡ್ಡಾಯವಲ್ಲ. ನೋಟಿಸ್'ಗೆ ನೀವು ನೀಡುವ ಉತ್ತರದ ಆಧಾರದ ಮೇಲೆ ತೆರಿಗೆ ಪ್ರಮಾಣ ಕಡಿಮೆಯಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಜಿಎಸ್ಟಿ ಸಂಪೂರ್ಣ ವಿನಾಯಿತಿ ಇರುವ ಹಣ್ಣು, ತರಕಾರಿ, ಹಾಲು ಮುಂತಾದ ಉತ್ಪನ್ನಗಳೂ ಇವೆ. ಮತ್ತೊಂದೆಡೆ ಶೇ.28ರಷ್ಟು ಜಿಎಸ್ಟಿ ಇರುವ ಗುಟ್ಕಾ ಮತ್ತು ಸಿಗರೇಟು ಉತ್ಪನ್ನಗಳೂ ಇವೆ. ಹೀಗಾಗಿ, ವರ್ತಕರು ತಮ್ಮದು ಯಾವ ವ್ಯಾಪಾರ ಎಂದು ತಿಳಿಸಿದರೆ ತೆರಿಗೆ ಕಡಿಮೆಯಾಗುತ್ತದೆ ಎಂದರು. 2025ರ ಜನವರಿ ತಿಂಗಳಲ್ಲಿ ಪೋನ್ ಹಾಗೂ ಪೇಟಿಎಂನಿಂದ ವರ್ತಕರ ವಹಿವಾಟುಗಳ ಕುರಿತು ಡೇಟಾ ಸಿಕ್ಕಿದೆ. ಇದೇ ಆಧಾರದ ಮೇಲೆ ಜಿಎಸ್ಟಿ ಮಿತಿ ಮೀರಿ ವಹಿವಾಟು ನಡೆಸಿದವರನ್ನು ಗುರುತಿಸುತ್ತಿದ್ದೇವೆ. ಮೊದಲ ಹಂತದಲ್ಲಿ ಕೋಟ್ಯಂತರ ರೂ. ಹಣ ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಬೇಕರಿ, ಕಾಂಡಿಮೆಂಟ್, ಹಣ್ಣು-ತರಕಾರಿ, ಹೂವು, ಡೈರಿ, ಮಾಂಸದ ಅಂಗಡಿ, ಸಣ್ಣ ಗಾತ್ರದ ಬಟ್ಟೆ ವ್ಯಾಪಾರಿಗಳು ಇದರಲ್ಲಿದ್ದಾರೆ ಎಂದು ಅವರು ತಿಳಿಸಿದರು.
ಸೇವೆ ಸಂಬಂಧಿಸಿದ ವ್ಯಾಪಾರಕ್ಕೆ 20 ಲಕ್ಷ ರು. ಹಾಗೂ ಸಗಟು ವ್ಯಾಪಾರಕ್ಕೆ 40 ಲಕ್ಷ ರು. ಎಂದು ಜಿಎಸ್ಟಿ ಮಿತಿಯನ್ನು 8 ವರ್ಷಗಳ ಹಿಂದೆ ನಿಗದಿಪಡಿಸಲಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ವ್ಯಾಪಾರದಲ್ಲಿ ಲಾಭಾಂಶ ಕಡಿಮೆಯಾಗಿದೆ. ಹೀಗಾಗಿ, ಜಿಎಸ್ಟಿ ಮಿತಿಯನ್ನು ಕ್ರಮವಾಗಿ 50 ಲಕ್ಷ ರು. ಮತ್ತು 1 ಕೋಟಿ ರು.ಗೆ ಹೆಚ್ಚಿಸಬೇಕು ಎಂದು ಅನೇಕ ವ್ಯಾಪಾರಿಗಳು ಮನವಿ ಮಾಡಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದರು.
Small traders who have received GST notices need not panic, as the penalty amounts mentioned in the notices are not final or binding, the Karnataka Commercial Tax Department has clarified. Officials emphasized that the final tax and penalty amounts will be determined based on the trader’s response to the notice.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm