ಬ್ರೇಕಿಂಗ್ ನ್ಯೂಸ್
24-07-25 08:01 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24 : ಆರ್ ಸಿಬಿ ತಂಡ ಐಪಿಎಲ್ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ, ಆರ್ಸಿಬಿ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ ಸಿಎ) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯಕ್ಕೆ ಬರಲಾಗಿದೆ.
ಕಾಲ್ತುಳಿತ ಘಟನೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ, ಶಿಫಾರಸು ಆಧರಿಸಿ ನಂತರ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನ ಕೈಗೊಳ್ಳಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೈಕಲ್ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.
ಇದೀಗ ಸಚಿವ ಸಂಪುಟ ಕ್ರಿಮಿನಲ್ ಕೇಸ್ಗೆ ತೀರ್ಮಾನ ಕೈಗೊಂಡಿರುವುದರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್ಸಿಬಿ ತಂಡದ ರಾಜೇಶ್ ಮೆನನ್, ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಎಂಡಿ ವೆಂಕಟ್ ವರ್ಧನ್ , ಡಿಎನ್ಎ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಲಿದ್ದು ಕ್ರಿಮಿನಲ್ ಕೇಸ್ ಎದುರಿಸಲಿದ್ದಾರೆ.
ಇದಲ್ಲದೆ, ಮೈಕಲ್ ಡಿಕುನ್ಹಾ ವರದಿ ಆಧರಿಸಿ ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಬಿ.ದಯಾನಂದ್, ಐಪಿಎಸ್ ಅಧಿಕಾರಿಗಳಾದ ವಿಕಾಸ್ ಕುಮಾರ್ ವಿಕಾಸ್, ಕಬ್ಬನ್ ಪಾರ್ಕ್ ಸಬ್ ಡಿವಿಷನ್ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಪಿಐ ಗಿರೀಶ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಾಗಲಿದೆ.
In a major decision following the stampede incident near Bengaluru’s M. Chinnaswamy Stadium during RCB’s IPL victory celebrations, the Karnataka state cabinet has approved the filing of criminal cases against the Royal Challengers Bangalore (RCB) management, event organizers DNA Networks, and the Karnataka State Cricket Association (KSCA). The tragic incident claimed the lives of 11 people.
08-04-26 08:44 pm
HK News Staffer
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm