Jeep Chikkamagaluru Accident: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೀಪ್, 23 ವರ್ಷದ ಮಗ ನೀರುಪಾಲು, ಕೆರೆಗೆ ಹಾರಿ ಜೀವ ಬಿಟ್ಟ ಅಮ್ಮ !

25-07-25 01:22 pm       HK News Desk   ಕರ್ನಾಟಕ

ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಪಿಕಪ್ ಜೀಪ್ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ.

ಚಿಕ್ಕಮಗಳೂರು, ಜುಲೈ 25: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ. ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ.

ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು. ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು.

ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರತ್ನಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a heart-wrenching tragedy near Kolamage village in Kalasa Taluk, Chikkamagaluru district, a 23-year-old youth died after the pickup jeep he was driving lost control and plunged into the Bhadra River. In a devastating turn of events, the victim's grief-stricken mother later ended her life by jumping into a nearby lake.