ಬ್ರೇಕಿಂಗ್ ನ್ಯೂಸ್
28-07-25 11:07 am HK News Desk ಕರ್ನಾಟಕ
ಕಾರವಾರ, ಜುಲೈ 28 : ರಾಜ್ಯ ಸರ್ಕಾರದಲ್ಲಿ ಸಿಎಂ ಮತ್ತು ಡಿಸಿಎಂ ಮ್ಯೂಸಿಕಲ್ ಚೇರ್ ಆಡ್ತಿದ್ದಾರೆ. ಸಿದ್ದರಾಮಯ್ಯನವರನ್ನೇ ಸಿಎಂ ಅಂತ ಅನ್ಕೊಂಡಿದ್ವಿ. ಆದ್ರೆ ರಾಜ್ಯದಲ್ಲಿ ಸೂಪರ್ ಸಿಎಂ ಇದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕುಮಟಾದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕೆಂದರೆ ಸುರ್ಜೇವಾಲಾ ಹತ್ತಿರ ಹೋಗಬೇಕಿದೆ. ರಾಜ್ಯ ಸರ್ಕಾರದಲ್ಲಿ ಒಬ್ಬರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳಬೇಕು ಅಂತ, ಇನ್ನೊಬ್ಬರಿಗೆ ಡಿಸಿಎಂ ಸ್ಥಾನದಿಂದ ಸಿಎಂ ಆಗಬೇಕೆಂದು ಹಂಬಲವಿದೆ. ಮತ್ತೊಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಇವರನ್ನು ಖಾಲಿ ಮಾಡಿಸಿ ತಾವು ಕುಳಿತುಕೊಳ್ಳುವ ಪ್ಲಾನ್ ನಡೀತಿದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಅಂತ ಇಲ್ಲಿಯವರೆಗೆ ನಾವು ಅಂದುಕೊಂಡಿದ್ದೆವು. ಆದ್ರೆ ರಾಜ್ಯದಲ್ಲಿ ಸೂಪರ್ ಸಿಎಂ ಬಗ್ಗೆ ಈಗ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಯಾರಿಗೆ ಕೊಟ್ಟಿದ್ದೇವೆ ಎಂದು ಜನ ಚರ್ಚೆ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ. ಜನಗಳಿಗೆ ತೆರಿಗೆ ಹಾಕಿ ಲೂಟಿ ಮಾಡುತ್ತಿದ್ದಾರೆ. ನಾನು ಮುಂದಿನ ಚುನಾವಣೆಗೆ ನಿಲ್ಲುವ ಬಗ್ಗೆ ಆಲೋಚನೆ ಮಾಡಿಲ್ಲ. ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿ ಆಗಬೇಕು. ನನ್ನ ಹೋರಾಟ ಜೆಡಿಎಸ್ ಕಟ್ಟಬೇಕು, ಪಕ್ಷವನ್ನು ದಡ ಮುಟ್ಟಿಸುವುದು ಎಂದು ನಿಖಿಲ್ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಕುಮಟಾ ತಾಲೂಕಿನಲ್ಲಿ ಅತೀ ಹೆಚ್ಚು ಮೀನುಗಾರರಿದ್ದಾರೆ. ಸದ್ಯ ಅವರಿಗೆ ಕೋಲ್ಡ್ ಸ್ಟೋರೇಜ್ ಅವಶ್ಯಕತೆ ಇದೆ. ಈ ಕೂಡಲೇ ಸರ್ಕಾರ ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು.
ಮೀನುಗಾರರಿಗೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇಲ್ಲಿನ ಜನತೆ ಯಾವುದೇ ಗ್ಯಾರಂಟಿಯನ್ನು ನಂಬಿಕೊಂಡು ಜೀವನ ಮಾಡುತ್ತಿಲ್ಲ. ಶಾಶ್ವತ ಪರಿಹಾರವನ್ನು ಮೀನುಗಾರರಿಗೆ ಒದಗಿಸಬೇಕು. ಈ ಕೂಡಲೇ ಸರ್ಕಾರ ಮೀನುಗಾರರ ಜತೆ ಸಭೆ ಮಾಡಿ ಅವರಿಗೆ ಸೂಕ್ತ ಪರಿಹಾರ ಒದಗಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಆಗ್ರಹಿಸಿದರು.
ಈ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಕಾರಣ ಉತ್ತರಕನ್ನಡ ಜಿಲ್ಲೆಯ ಜನರು ಪರದಾಡುತ್ತಿದ್ದಾರೆ. ನೂರಾರು ಕಿಲೋ ಮೀಟರ್ ದೂರವಿರುವ ಅಕ್ಕಪಕ್ಕದ ಜಿಲ್ಲೆಗಳನ್ನು ಚಿಕಿತ್ಸೆಗಾಗಿ ಆಶ್ರಯಿಸಬೇಕಾಗಿದೆ. ಇಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಯಾವುದೇ ಚಿಂತನೆ ಮಾಡಿಲ್ಲ. ಇತಿಹಾಸದಲ್ಲೇ ಇಂಥ ಕೆಟ್ಟ ಸರ್ಕಾರವನ್ನು ನೋಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
JDS state president Nikhil Kumaraswamy launched a scathing attack on the Congress-led state government, accusing Chief Minister Siddaramaiah and Deputy Chief Minister D.K. Shivakumar of playing "musical chairs" over power. Speaking to the media in Kumta after launching a party membership drive, Nikhil alleged that there is a "Super CM" in the government, overshadowing the elected Chief Minister.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm