ಬ್ರೇಕಿಂಗ್ ನ್ಯೂಸ್
01-08-25 02:55 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1 : ಮೈಸೂರಿನ ಕೆಆರ್ ನಗರ ಮೂಲದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2ರಂದು ಪ್ರಕಟಿಸುವ ಸಾಧ್ಯತೆಯಿದೆ.
ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದು ಕಣ್ಣು ಒರೆಸುತ್ತಲೇ ಹೊರಗೆ ಬಂದಿದ್ದಾನೆ. ಕೆ.ಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30ರಂದೇ ನ್ಯಾಯಾಲಯ ವಿಚಾರಣೆ ಪೂರ್ತಿಗೊಳಿಸಿತ್ತು. ಕೆಲವು ಕಾರಣಗಳಿಂದಾಗಿ ತೀರ್ಪು ಕಾಯ್ದಿರಿಸುತ್ತಿರುವುದಾಗಿ ಜಡ್ಜ್ ತಿಳಿಸಿದ್ದರು. ಗೂಗಲ್ ಮ್ಯಾಪ್ ಮತ್ತು ಮೊಬೈಲ್ ಸಾಕ್ಷ್ಯದ ಬಗ್ಗೆ ಪ್ರಾಸಿಕ್ಯೂಶನ್ ಮತ್ತು ಆರೋಪಿ ಪರ ವಕೀಲರ ಸ್ಪಷ್ಟನೆ ಕೇಳಿದ ಬಳಿಕ ತೀರ್ಪು ಪ್ರಕಟಿಸಿದ್ದಾರೆ.
ಹಲವಾರು ಮಹಿಳೆಯರ ಮೇಲೆ ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಮೈಸೂರಿನ ಕೆಆರ್ ನಗರದ ಕೆಲಸದಾಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಒಂದು. ಚುನಾವಣೆ ಸಂದರ್ಭದಲ್ಲಿ ವಿಡಿಯೋ ಲೀಕ್ ಆಗುತ್ತಿದ್ದಂತೆ ದೂರು ನೀಡಲು ಹೋದ ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ರೇವಣ್ಣ ಮತ್ತು ಭವಾನಿಗೆ ಜಾಮೀನು ಸಿಕ್ಕಿದ್ದರೂ, ಪ್ರಜ್ವಲ್ ಒಂದು ವರ್ಷದಿಂದ ಜೈಲಿನಲ್ಲೇ ಇದ್ದಾನೆ.
In a significant development, the Special Court for People’s Representatives in Bengaluru has declared former Hassan MP Prajwal Revanna guilty in the abduction and rape case involving a working woman from KR Nagar in Mysuru district.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am