ಬ್ರೇಕಿಂಗ್ ನ್ಯೂಸ್
03-08-25 09:30 pm HK News Desk ಕರ್ನಾಟಕ
ಬಾಗಲಕೋಟೆ, ಆ.3 : ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಮುಖ್ಯಮಂತ್ರಿ ಆಗುತ್ತೇವೆ. ನಾನು 1980ರಲ್ಲೇ ಸಿಎಂ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಸಿಎಂ ಸ್ಥಾನ ಸಿಗಲಿಲ್ಲ. ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 1979 ರಿಂದ 1995 ರವರೆಗೆ ನಾನೇ ಪಕ್ಷದ ಸಂಘಟನೆ ಮಾಡಿದ್ದೆ. ಆದರೆ ಆಗ ನನ್ನ ಬದಲು ಆರ್ ಗುಂಡೂರಾವ್ ಸಿಎಂ ಆದರು, ನಂತರ ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟಿಲ್ ಸಿಎಂ ಆದರು. ಹಾಗಂತ ನನಗೆ ಸಿಗಲಿಲ್ಲ ಎಂದು ನಾನು ಪಶ್ಚಾತ್ತಾಪ ಪಡಲಿಲ್ಲ ಎಂದು ಹೇಳುವ ಮೂಲಕ ಖರ್ಗೆ ಮಾತಿಗೆ ಟಾಂಗ್ ಇಟ್ಟಿದ್ದಾರೆ.
ನನ್ನಿಂದಲೇ ಪಕ್ಷದ ಅಧಿಕಾರಕ್ಕೆ ಬಂತು ಎಂದು ಹೇಳಲು ಆಗುವುದಿಲ್ಲ. ಎಷ್ಟು ವರ್ಷ ಸಿಎಂ ಆಗಿದ್ದೇವೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಿವಿಮಾತು ಹೇಳಿದ್ದಾರೆ.
ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು, ಪೈಪೋಟಿ ಇರುವುದು ಸಾಮಾನ್ಯ. ಕೆಲವರಿಗೆ ಸಿಗುತ್ತದೆ ಕೆಲವರಿಗೆ ಸಿಗುವುದಿಲ್ಲ. ಸಾಯುವವರೆಗೂ ಕೆಲವರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸಿಗುವುದಿಲ್ಲ. ಆದರೆ ಆಧಿಕಾರವನ್ನು ವಾಮಮಾರ್ಗದ ಮೂಲಕ ಸಾಧಿಸಬಾರದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಈಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಅವರಿಗೆ ಆ ಆಸೆ ಇದೆ, ಅದರ ಬಗ್ಗೆ ತಪ್ಪು ತಿಳಿದುಕೊಳ್ಳಲು ಆಗುವುದಿಲ್ಲ. ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ ಕೆಲವೊಂದು ಸಾರಿ ಡೆಪ್ಯುಟಿ ಸಿಎಂ ಆದವರು ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಅಂತ ಪಶ್ಚಾತ್ತಾಪ ಪಡುವುದು ಬೇಡ ಎಂದು ತಿಳಿಸಿದರು.
Senior Congress leader and former Chief Minister Veerappa Moily has responded to Mallikarjun Kharge’s recent comments about being denied the Chief Minister’s post despite bringing the party to power. Moily stated that in politics, power does not always come to those who expect it, and one must not regret such missed opportunities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am