ಬ್ರೇಕಿಂಗ್ ನ್ಯೂಸ್
08-08-25 06:23 pm HK News Desk ಕರ್ನಾಟಕ
ಮೈಸೂರು, ಆ.8 : ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಏನು ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಧರ್ಮಸ್ಥಳ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವುದು ಇಲ್ಲಿ ಸ್ಪಷ್ಟವಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಒಂದೇ ಒಂದು ಸಾಕ್ಷಿ ಇಲ್ಲದೆ ಯಾಕೆ ವಿರೇಂದ್ರ ಹೆಗ್ಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ? ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ ಇದ್ದೇವೆ. ಅದರ ಬಗ್ಗೆ ಮೂರು ತನಿಖಾ ಸಂಸ್ಥೆಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ.
ಆದರೆ ಈಗ ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಅಂತ ಬಿಂಬಿಸುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ? ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಆರೋಪಿ ಅಂತ ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿದೆ.
ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದುಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ.
ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ. ಟೆಸ್ಟ್ ಮ್ಯಾಚ್ ಗಿಂತಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಅಲ್ಲಿನ ಧರ್ಮಾಧಿಕಾರಿ ಹೆಗ್ಡೆ ಅವರು ಯಾಕೆ ನಿಮಗೆ ಟಾರ್ಗೆಟ್ ಆಗಿದ್ದಾರೆ. ಅದಕ್ಕು ಮುನ್ನ ಆರೋಪ ಮಾಡಿರುವ ಅನಾಮಿಕ ವ್ಯಕ್ತಿಯ ಪೂರ್ವಾಪರ ಮೊದಲು ಬಹಿರಂಗ ಆಗಲಿ ಎಂದು ಪ್ರತಾಪ್ ಸಿಂಹ ಹೇಳಿದರು.
Former MP Pratap Simha has launched a sharp attack on the Karnataka government over the ongoing investigation into the Dharmasthala human remains case, questioning the motives behind targeting Dharmadhikari Veerendra Heggade.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am