ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 09:42 pm
Mangalore Correspondent
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm