ಬ್ರೇಕಿಂಗ್ ನ್ಯೂಸ್
11-08-25 11:18 am Bangalore Correspondent ಕರ್ನಾಟಕ
ಬೆಂಗಳೂರು, ಆ.11 : ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ದಯವಿಟ್ಟು ರಕ್ಷಣೆ ಕೊಡಿ ಎಂದು ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಇದರಂತೆ, ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಕೊಟ್ಟು ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ.
'ನನಗೆ ವಯಸ್ಸಿನ್ನು ಹದಿನಾರು. 8ನೇ ತರಗತಿಯಲ್ಲಿ ಓದುತ್ತಿದ್ದಾಗ ಪೊಲೀಸ್ ಸಿಬ್ಬಂದಿ ಶಾಲೆಗೆ ಆಗಮಿಸಿ ಬಾಲ್ಯ ವಿವಾಹದಲ್ಲಿ ಅನುಭವಿಸಬೇಕಾದ ತೊಂದರೆ ಬಗ್ಗೆ ತಿಳಿಸಿದ್ದರು. ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದರು. ಅಂದು ಶಾಲೆಯಲ್ಲಿ ಕೇಳಿದ್ದ ಪೊಲೀಸರ ಬುದ್ದಿ ಮಾತು ನೆನಪಾಗಿ ನೇರವಾಗಿ ಪೊಲೀಸ್ ಸ್ಟೇಷನ್ ಬಂದೆ ಎಂದು ಬಾಲಕಿ ಠಾಣೆಯ ಪಿಎಸ್ಐ ಮುಂದೆ ವಿವರಿಸಿದ್ದಾಳೆ.
''ನಾನೀಗ ಶಾಲೆ ಬಿಟ್ಟು ಮನೆಯಲ್ಲಿದ್ದೇನೆ. ನಮ್ಮ ಅಪ್ಪ, ಅಮ್ಮ ಹಾಗೂ ಅಣ್ಣ ನನಗೆ ಮದುವೆ ಮಾಡಲು ಮುಂದಾಗಿದ್ದಾರೆ. ಮದುವೆ ಮಾಡಲು ಆಗಸ್ಟ್ 17 ರಂದು ದಿನಾಂಕ ನಿಗದಿ ಮಾಡಿದ್ದಾರೆ. ನನಗೆ ಮದುವೆಯಾಗಲು ಈಗಲೇ ಇಷ್ಟವಿಲ್ಲ. ಆದರೂ ನನ್ನ ಪೋಷಕರು ಬಲವಂತ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ.
ನಂತರ ಪಿಎಸ್ಐ ಮಹೇಶ್ ಹೊಸಪೇಟೆ, ತಾಲ್ಲೂಕು ಸಿಡಿಪಿಒ ನವೀನ್ ಕುಮಾರ್, ಹುಡುಗಿಯ ಪೋಷಕರನ್ನು ಕರೆಸಿ ಮದುವೆಯನ್ನು ನಿಲ್ಲಿಸುವಂತೆ ಸೂಚಿಸಿದರು. ಈ ಮಧ್ಯೆ, ಪುನರ್ವಸತಿ ಯೋಜನೆಯ ಪ್ರಕಾರ ಬಾಲಕಿಯನ್ನು ಚಿತ್ರದುರ್ಗದಲ್ಲಿರುವ ಸರ್ಕಾರಿ ಬಾಲಗೃಹಕ್ಕೆ ಕಳುಹಿಸಲಾಗಿದೆ.
In a commendable act of courage, a 16-year-old girl from Chitradurga district approached the police directly to report that her parents were preparing to get her married against her will. The girl’s swift action led to the prevention of the planned child marriage.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am