ಬ್ರೇಕಿಂಗ್ ನ್ಯೂಸ್
12-08-25 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆ.12 : ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದ್ದು ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.
ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ನೀಡಿದ್ದ ಕೆಎನ್ ರಾಜಣ್ಣ ತಲೆದಂಡ ಆಗಿದ್ದು, ರಾಜ್ಯ ಸಚಿವ ಸಂಪುಟದಿಂದ ಬಲವಂತದಿಂದ ಕಿತ್ತು ಹಾಕಲಾಗಿದೆ. ಸಿದ್ದರಾಮಯ್ಯ ಆಪ್ತರಾಗಿ ಗುರುತಿಸಿದ್ದ ಅವರನ್ನು ಏಕಾಏಕಿ ಕಿತ್ತು ಹಾಕಿರುವ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 'ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.
ನನ್ನ ಬಳಿ ಇರುವ ಈ ಷಡ್ಯಂತ್ರ, ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ
ಇದೇ ವೇಳೆ 'ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
A day after being dropped from Chief Minister Siddaramaiah’s cabinet, former Karnataka Minister K.N. Rajanna has alleged that a “major conspiracy” was behind his removal, claiming he knows exactly who orchestrated it.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am