ಬ್ರೇಕಿಂಗ್ ನ್ಯೂಸ್
15-08-25 07:15 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಹೇಳಿದಂತೆ, ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದಲ್ಲಿ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಎಸ್‌ಐಟಿ ತನಿಖೆ ಮಾಡಲ್ಲ ಅನ್ನುತ್ತಿದ್ದ ಸಿದ್ದರಾಮಯ್ಯ ಅವರಿಗೆ ಎಸ್‌ಐಟಿ ರಚಿಸುವಂತೆ ಯಾವ ಶಕ್ತಿಗಳು ಒತ್ತಡ ಹೇರಿದ್ದು ಎಂಬುದನ್ನು ಸದನದಲ್ಲಿ ಬಹಿರಂಗಪಡಿಸಬೇಕು. ಸರ್ಕಾರ ಧರ್ಮಸ್ಥಳ ತನಿಖೆಯ ಮಧ್ಯಂತರ ವರದಿಯನ್ನು ನೀಡಬೇಕು ಎಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹದ ವಿಚಾರದಲ್ಲಿ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಕೂಡ ಮಂಜುನಾಥನ ಭಕ್ತರು. ಬಿಜೆಪಿಯವರಿಗಿಂತ ಕಾಂಗ್ರೆಸಿಗರೇ ಹೆಚ್ಚು ಧರ್ಮಸ್ಥಳಕ್ಕೆ ಹೋಗುತ್ತಾರೆ. ಈ ಬಗ್ಗೆ ಸ್ಪಷ್ಟನೆ ಸಿಕ್ಕರೆ ಅಪಪ್ರಚಾರ ತಪ್ಪುತ್ತದೆ. ಯೂಟ್ಯೂಬರ್‌ಗಳು ತಮಗೆ ತೋಚಿದಂತೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳನ್ನು ಈ ವಿಷಯದಲ್ಲಿ ಎಳೆದು ತರಬಾರದು. ಶವ ಹೂತಿಟ್ಟ ಸ್ಥಳದಲ್ಲಿ ಯಾವುದೇ ಕುರುಹು ಸಿಗದಿದ್ದರೆ ದೂರುದಾರ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ. ದೇವಸ್ಥಾನದ ಆವರಣದ ಒಳಗೆ ಮತ್ತು ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಇದನ್ನು ಜಾರಿ ಮಾಡಬೇಕು. ಸ್ವಚ್ಛತೆ ಹಾಗೂ ಪರಿಸರವನ್ನ ಗಮನದಲ್ಲಿರಿಸಿ ಬ್ಯಾನ್ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Endowments Minister Ramalinga Reddy stated that in the Dharmasthala case, if no trace of a buried body is found at the location indicated by the complainant, action will have to be taken against him.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm