ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್‌ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್‌ಶಿಪ್‌ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am