ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ; ಡಿಸಿಎಂ ಡಿಕೆಶಿ 

15-08-25 10:29 pm       Bangalore Correspondent   ಕರ್ನಾಟಕ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ.

ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.

'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.

The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.