ಬ್ರೇಕಿಂಗ್ ನ್ಯೂಸ್
16-08-25 08:05 pm Bangalore Correspondent ಕರ್ನಾಟಕ
ಬೆಂಗಳೂರು, ಆ. 16 : ಧರ್ಮಸ್ಥಳ ಪ್ರಕರಣದಲ್ಲಿ ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾರು ತನಿಖೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದಕ್ಕೆಂದು ಗೃಹ ಸಚಿವರಿದ್ದು, ಅವರು ನಿಭಾಯಿಸುತ್ತಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ನಾವು ನಮ್ಮ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತೇವೆ. ಅಲ್ಲಿ ನೂರಾರು ಜನ ಇರುತ್ತಾರೆ, ನಮಗೆ ಪೊಲೀಸರಿಂದಲೇ ಮಾಹಿತಿ ಬರಬೇಕು ಎಂದೇನಿಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಡಿಕೆ ಮಾತನಾಡಿ, ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ, ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂಬ ಕುರಿತು ಮಾತನಾಡಿ, ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬಂಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು.
ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು. ನ್ಯಾಯಾಲಯದ ಮುಂದೆ ದೂರು ನೀಡಿದ ನಂತರವೂ ಸರ್ಕಾರ ತನಿಖೆ ಮಾಡದಿದ್ದರೇ ಬಿಜೆಪಿಯವರು ಏನು ಹೇಳುತ್ತಿದ್ದರು? ಅವರೇ ಟೀಕೆ ಮಾಡುತ್ತಿರಲಿಲ್ಲವೇ? ಈಗ ಈ ರೀತಿ ರಾಜಕಾರಣ ಮಾಡುತ್ತಿದ್ದು, ನಾವು ಇದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ಮುಸುಕುಧಾರಿ ದೂರುದಾರನಿಗೆ ಮಂಪರು ಪರೀಕ್ಷೆ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಅವರು ಏನಾದರೂ ಆಗ್ರಹ ಮಾಡಲಿ, ಮಂಪರು ಪರೀಕ್ಷೆ ಅಥವಾ ಬೇರೆ ಯಾವುದೇ ತನಿಖೆಗೆ ಬೇಕಾದರೂ ಆಗ್ರಹಿಸಲಿ. ಅದು ತಪ್ಪಲ್ಲ. ಎಸ್ಐಟಿ ತನಿಖೆ ಸ್ವಾಗತಿಸಿದವರು ಇಂದು ಈ ರೀತಿ ಮಾತನಾಡುತ್ತಿದ್ದಾರೆ. ಎಷ್ಟು ಗುಂಡಿ ತೆಗೆಯಬೇಕು, ಬೇಡ ಎಂದು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ಅವರ ತನಿಖೆಯಲ್ಲಿ ನಾವೇಕೆ ಹಸ್ತಕ್ಷೇಪ ಮಾಡಬೇಕು? ಎಂದು ಮರುಪ್ರಶ್ನಿಸಿದರು.
Karnataka Deputy Chief Minister D.K. Shivakumar on Friday firmly stated that he will not interfere in the ongoing SIT investigation related to the Dharmasthala burial case. Speaking to the media in Bengaluru, Shivakumar said the matter is being handled by the Home Department, and it is up to the Home Minister to make decisions regarding the probe.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm