ಬ್ರೇಕಿಂಗ್ ನ್ಯೂಸ್
20-08-25 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಜನಾರ್ಧನ ರೆಡ್ಡಿ, ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ. ಈ ಸಂಪೂರ್ಣ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ ಎಂದು ಗಂಭೀರ ಆರೋಪ ಮಾಡಿದ್ದಾರೆ.
ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸಸಿಕಾಂತ್ ಸೆಂಥಿಲ್ ಸೇರಿ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕಾರ್ಯಸೂಚಿಗಳನ್ನು ಸಿದ್ಧಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಈ ಪ್ರಕರಣದಲ್ಲಿ ಆಸಕ್ತಿ ಇರಲಿಲ್ಲವಾದರೂ, ಹೈಕಮಾಂಡ್ನ ಒತ್ತಡ ತಂದು ಎಸ್ಐಟಿ ತನಿಖೆ ಮಾಡಿಸಲಾಗಿದೆ. ಎಡಪಂಥೀಯ ನಿಲುವುಗಳನ್ನು ಹೊಂದಿರುವ ಸಸಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು, ಇಲ್ಲವೇ ಸಿಬಿಐ ತನಿಖೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗು ಬರುತ್ತಿದೆ ;
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಸಸಿಕಾಂತ್ ಸೆಂಥಿಲ್, ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ. ಅವರು ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ. ರೆಡ್ಡಿ ಆರೋಪ ಕೇಳಿ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ.
ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಜನಾರ್ಧನ ರೆಡ್ಡಿ ಅವರ ಬಂಧನ ಆಗಿತ್ತು. ನಾನು ಅವಾಗ ಮಾತ್ರ ರೆಡ್ಡಿಯವರನ್ನು ನೋಡಿದ್ದು ಎಂದು ಸೆಂಥಿಲ್ ಹೇಳಿದ್ದಾರೆ.
ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ.
ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ 'ಮತಗಳ್ಳತನ' ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
In a sensational claim, Karnataka MLA and Kalyana Rajya Pragathi Paksha (KRPP) leader Janardhana Reddy has alleged that Congress MP and former IAS officer Sasikanth Senthil is the mastermind behind the ongoing controversy in the Dharmasthala case, which has gained nationwide attention.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm