ಬ್ರೇಕಿಂಗ್ ನ್ಯೂಸ್
21-08-25 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಮಂಗಳೂರು ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ರೀತ್ಯ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ.
ತಮ್ಮ ಮನವಿ ಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮವನ್ನು ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರ್ಮಿಟ್ ಪಡೆಯದೆ ಎಲೆಕ್ಟಿಕ್ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಿ 2024ರ ಜು.26ರಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದರಿಂದ ಮಂಗಳೂರಿನಲ್ಲಿ ಎಲೆಕ್ನಿಕ್ ವಾಹನಗಳ ಸಂಖ್ಯೆ ಹೆಚ್ಚಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿದ್ದ ಆಟೋ ರಿಕ್ಷಾಗಳಿಗೆ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಎದುರಾಗಿದೆ.
2023ರಲ್ಲಿ 7,629ರಷ್ಟಿದ್ದ ಆಟೋರಿಕ್ಷಾ ಸಂಖ್ಯೆ ಜಿಲ್ಲಾಧಿಕಾರಿ ಆದೇಶದ ನಂತರ ಅಗತ್ಯ ಪ್ರಮಾಣಕ್ಕಿಂತ ಹತ್ತು ಪಟ್ಟು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.
ಅಲ್ಲದೆ 2025ರ ಜು.9ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಆಟೋ ಚಾಲಕರ ಸಂಘವು ಮನವಿ ಪತ್ರ ನೀಡಿ, ಹೊಸ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬಾರದು ಎಂದು ಕೋರಿತ್ತು. ಆದರೆ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ಮನವಿ ಪತ್ರ ಪರಿಗಣಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಸಂಘ ಕೋರಿತ್ತು.
The Karnataka High Court has directed the Deputy Commissioner of Dakshina Kannada district to take a legal and appropriate decision within two weeks regarding a petition filed by the Mangalore Auto Rickshaw Drivers and Owners Association, urging the authorities not to grant fresh permits for electric autos in Mangaluru city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am