ಬ್ರೇಕಿಂಗ್ ನ್ಯೂಸ್
22-08-25 12:29 pm HK News Desk ಕರ್ನಾಟಕ
ತುಮಕೂರು, ಆ 22 : ತಾನು ಓದುವ ಸರಕಾರಿ ಶಾಲೆಗೆ ಕಾಂಪೌಂಡ್ ಕಟ್ಟಿಸಿಕೊಡುವವರೆಗೆ ನಾನು ಶಾಲೆಗೆ ಹೋಗಲ್ಲ ಎಂದು ನಾಲ್ಕನೇ ತರಗತಿ ಬಾಲಕಿಯೊಬ್ಬಳು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಸ್ವತಃ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಭೇಟಿ ನೀಡಿದರು. ಈ ವೇಳೆ ಬಾಲಕಿಯ ಮನವೊಲಿಸಲು ನ್ಯಾಯಾಧೀಶರು ಪ್ರಯತ್ನಿಸಿದ್ದಾರೆ. ಆದರೂ ಕೂಡ ಬಾಲಕಿಯು ಶಾಲಾ ಕಾಂಪೌಂಡ್ ನಿರ್ಮಾಣ ಮಾಡಿದ ನಂತರವೇ ಶಾಲೆಗೆ ಹೋಗುವುದಾಗಿ ಪಟ್ಟು ಹಿಡಿದು ಕುಳಿತಿದ್ದಾಳೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೆಳಧರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಂದಿಕೊಂಡಂತೆ ಕಲ್ಯಾಣ ಮಂಟಪವೊಂದನ್ನು ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸುವ ಜನರು ಶಾಲಾ ಆವರಣದೊಳಗೆ ಬಂದು ಶಾಲೆಯ ಪರಿಸರವನ್ನು ಅಸುಚಿಗೊಳಿಸಿ ತೆರಳುತ್ತಿದ್ದಾರೆ. ಇದರಿಂದಾಗಿ ಶಾಲಾ ಆವರಣವೆಲ್ಲ ಕಸಕಡ್ಡಿಗಳಿಂದ ತುಂಬಿ ತುಳುಕುತ್ತಿದೆ.
ಪರೀಕ್ಷೆ ಬರೆಯಲೂ ಕಿರಿಕಿರಿ:
ಶಾಲೆಯಲ್ಲಿ ಪಾಠ ಕೇಳಲು ಹಾಗೂ ಪರೀಕ್ಷಾ ಸಮಯದಲ್ಲಿ ಪರೀಕ್ಷೆ ಬರೆಯಲು ಸಹ ತೀವ್ರ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಬಾಲಕಿಯು ನ್ಯಾಯಾಧೀಶರಿಗೆ ತಿಳಿಸಿದ್ದಾರೆ. ಈ ಮೂಲಕ 4ನೇ ತರಗತಿ ವಿದ್ಯಾರ್ಥಿನಿ ತಮ್ಮ ಸರ್ಕಾರಿ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಬೇಕೆಂದು ಹೋರಾಟ ನಡೆಸುತ್ತಿದ್ದಾಳೆ.
ಇತರ ಸಂದರ್ಭಗಳಲ್ಲಿ ಆಟ ಆಡೋಕೆ ಮೈದಾನ ಇರಲ್ಲ. ಮೈದಾನದಲ್ಲಿ ವಾಹನಗಳು ನಿಲ್ಲಿಸುವುದು, ಎಂಜಲು ಎಲೆಗಳನ್ನು ಎಸೆಯುವುದರಿಂದ ಆಟ ಮತ್ತು ಪಾಠಕ್ಕೆ ತೀವ್ರ ಸಮಸ್ಯೆ ಆಗುತ್ತಿದ್ದು, ಕೂಡಲೇ ಆಟದ ಮೈದಾನಕ್ಕೆ ಕಾಂಪೌಂಡ್ ಕಟ್ಟಿಸಿಕೊಡಿ ಇಲ್ಲಾ ಅಂದ್ರೆ ನಾನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದು ಕುಳಿತಿದ್ದಾಳೆ.
ಕಾಂಪೌಂಡ್ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಇಒಗೆ ಜಡ್ಜ್ ಸೂಚನೆ:
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರಿನ್ನಿಸ, ಕಾಂಪೌಂಡ್ ನಿರ್ಮಿಸುವಂತೆ ಸೂಕ್ತಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೂ ಕೂಡ ಪತ್ರವನ್ನು ಕಳುಹಿಸಿರುವುದಾಗಿ ತಿಳಿಸಿದ್ದಾರೆ.
In a heartening yet powerful display of civic awareness, a Class 4 student from a government school in Beladhara village of Koratagere taluk, Tumakuru district, refused to attend school until a compound wall is built around the premises.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am