ಬ್ರೇಕಿಂಗ್ ನ್ಯೂಸ್
25-08-25 10:37 am HK News Desk ಕರ್ನಾಟಕ
ಯಾದಗಿರಿ, ಆ 25 : ಧರ್ಮಸ್ಥಳದಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದ ಶವಗಳನ್ನು ಹೂತುಹಾಕಿರುವುದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಬಳಿಕ, ಈ ಪ್ರಕಣವನ್ನು ಎಸ್ಐಟಿ ತನಿಖೆಗೆ ವಹಿಸಲಾಯಿತು. ಸದ್ಯ, ಎಸ್ಐಟಿ ಕೂಡ ತನಿಖೆಯನ್ನು ಚುರುಕುಗೊಳಿಸಿದೆ. ಈ ನಡುವೆ ಬಿಜೆಪಿ ನಾಯಕರು ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎನ್ಐಎ ತನಿಖೆಯಾದ್ರೆ ತಪ್ಪಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಎನ್ಐಎಗೆ ವಹಿಸಿದರೆ ತಪ್ಪೇನಿಲ್ಲ ;
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ, ಬೊಮ್ಮಾಯಿ ಆಗ್ರಹಕ್ಕೆ ಸಚಿವ ಸತೀಶ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಎನ್ಐಎ ತನಿಖೆಯಾದ್ರೆ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ.
ಎನ್ಐಎಗೆ ವಹಿಸಿದರೆ ಇದರ ಹಿಂದೆ ಯಾರಿದ್ದಾರೆ ಗೊತ್ತಾಗುತ್ತೆ ;
ಎನ್ಐಎ ತನಿಖೆ ಆದರೆ ಒಳ್ಳೆದು, ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಲಿದೆ. ಮುಕ್ತಿ ಆಗಬೇಕಾದರೆ ಎನ್ಐಎ ತನಿಖೆ ಇಲ್ಲವೇ ಅದಕ್ಕಿಂತ ಮೇಲೆ ದೊಡ್ಡ ತನಿಖೆ ಆಗಬೇಕು. ಕರ್ನಾಟಕ ಜನತೆ ಬೇರೆ ಕೆಲಸ ಬಿಟ್ಟು ಧರ್ಮಸ್ಥಳದ ಬಗ್ಗೆ ನೋಡ್ತಾ ಕುಳಿತಿದ್ದಾರೆ. ಧರ್ಮಸ್ಥಳದ ಬಗ್ಗೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ. ರಾಜ್ಯ ಸರಕಾರ ಎಸ್ಐಟಿ ತನಿಖೆಗೆ ನೀಡಿದೆ. ಇದರಲ್ಲಿ ಎಡಪಂಥೀಯ ಹಾಗೂ ಬಲಪಂಥೀಯ ಎಂಬುದು ಇಲ್ಲ. ದೇಶಕ್ಕೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಅಲ್ಲ ಎಂದರು.
ಅದು ಧರ್ಮಸ್ಥಳದ ವಿಚಾರ ಒಂದು ಊರಿಗೆ ಸಂಬಂಧಿಸಿದ್ದು, ಅದು ನೀವು ದೊಡ್ಡದು ಮಾಡಿ ಚರ್ಚೆ ಮಾಡುವುದು ಅನಾವಶ್ಯಕ. ಎಸ್ಐಟಿ ಅವರು 15 ದಿನಗಳಿಂದ ತನಿಖೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಮಾಡದಿದ್ದರೆ ಅದು ತನಿಖೆ ಯಾರು ಮಾಡ್ತಿದ್ರು?. ಬಿಜೆಪಿಯವರು ಕೋರ್ಟ್ ತನಿಖೆಗೆ ಸೂಚಿಸಿದ್ದು ಮುಚ್ಚಿ ಇಡುತ್ತಾರೆ. ಕಾಂಗ್ರೆಸ್ನವರ ಮೇಲೆ ಆರೋಪ ಮಾಡ್ತಾರೆ. ಯಾರೋ ಒಬ್ಬ ಅರ್ಜಿ ಹಾಕಿದಕ್ಕೆ ತನಿಖೆಗೆ ಕೋರ್ಟ್ ಆದೇಶ ಮಾಡಿದೆ ಎಂದು ಯಾದಗಿರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Public Works Minister Satish Jarkiholi has stated that there is no objection if the National Investigation Agency (NIA) takes over the probe into the Dharmasthala case. His statement comes in response to BJP leaders, including former Chief Minister Basavaraj Bommai, demanding that the case be handed over to the central agency.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am